Monday, May 20, 2024

ಪ್ರಾಯೋಗಿಕ ಆವೃತ್ತಿ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ- ನರೇಂದ್ರಸ್ವಾಮಿ ಭರವಸೆ

ಮಳವಳ್ಳಿ ತಾಲ್ಲೂಕಿನ ಸಕಾ೯ರಿ ಶಾಲೆಗಳನ್ನು ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಸಕಾ೯ರದ ಜೊತೆಗೆ ಸಾವ೯ಜನಿಕ ಸಹಯೋಗದೊಂದಿಗೆ ಮಾದರಿ ಶಾಲೆಗಳನ್ನಾಗಿ ಮಾಡಲು ಶ್ರಮಿಸಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ಸಿಗುವಂತೆ ಮಾಡಲು ಕ್ರಮ ವಹಿಸುವುದಾಗಿ ಶಾಸಕ ಪಿ.ಎಂ ನರೇಂದ್ರಸ್ವಾಮಿ ಭರವಸೆ ನೀಡಿದರು.

ಮಳವಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕಿನ ಶಿಕ್ಷಣ ಇಲಾಖೆಯ ಎಲ್ಲಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಳವಳ್ಳಿ ಪಟ್ಟಣದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ”ಗುಣಾತ್ಮಕ ಶಿಕ್ಷಣದ ಕಡೆ ನಮ್ಮೆಲ್ಲರ ನಡೆ” ಶಿಕ್ಷಕರೊಂದಿಗೆ ಸಂವಾದ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾಯ೯ಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಆತ್ಮಸ್ಥೈಯ೯ ತುಂಬಿದರೇ ವಿದ್ಯಾರ್ಥಿಗಳು ಕಲಿಕೆಯಲ್ಲಿ ಮುಂದೆ ಬರುತ್ತಾರೆಂದರ ಅವರು, ಸಕಾ೯ರಿ ಶಾಲೆಗಳಿಗೆ ಇಂಟರ್ ನೆಟ್ ಕಲ್ಪಿಸಲು ವೈಯಕ್ತಿಕವಾಗಿ ಸಹಾಯ ಮಾಡುತ್ತೇನೆಂದು ಭರವಸೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಪಾಟೀಲ್, ತಾಲ್ಲೂಕು ಪಂಚಾಯಿತಿ ಕಾಯ೯ ನಿರ್ವಾಹಕ ಅಧಿಕಾರಿ ಮಮತ, ಚಂದ್ರ ಪಾಟೀಲ್, ಪುರಸಭೆ ಸದಸ್ಯ ಶಿವಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್, ಅಕ್ಷರ ದಾಸೋಹ ಸಹಾಯಕ ನಿಧೆ೯ಶಕ ಮಹದೇವು, ಸಕಾ೯ರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಮಲ್ಲಿಕಾಜು೯ನಯ್ಯ, ಸಕಾ೯ರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ನಾಗೇಶ್, ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ  ಗುರುಸ್ವಾಮಿ, ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!