Friday, November 20, 2026

ಪ್ರಾಯೋಗಿಕ ಆವೃತ್ತಿ

ಪಿ.ಎಂ.ನರೇಂದ್ರಸ್ವಾಮಿ ವಿರುದ್ಧ ಯೂಟ್ಯೂಬ್ ಚಾನೆಲ್ ಅಪಪ್ರಚಾರ : ಕಾಂಗ್ರೆಸ್ ಮುಖಂಡರಿಂದ ಪೊಲೀಸರಿಗೆ ದೂರು

ಕೆಪಿಸಿಸಿ ಉಪಾಧ್ಯಕ್ಷ ಪಿ ಎಂ ನರೇಂದ್ರಸ್ವಾಮಿ ಅವರ ವಿರುದ್ದವಾಗಿ ‘ಸುದ್ದಿಮನೆ’ ಎಂಬ ಯೂಟ್ಯೂಬ್ ಚಾನೆಲ್ ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಮಾಡಲಾಗುತ್ತಿದ್ದು, ಯೂಟ್ಯೂಬ್ ಚಾನೆಲ್ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಡಿವೈಎಸ್‌ಪಿ ನವೀನ್ ಕುಮಾರ್ ಅವರಿಗೆ ದೂರು ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ ದೇವರಾಜು ದೂರು ನೀಡಿದ ನಂತರ ಮಾತಮಾಡಿ, ಸಾವಿರಾರು ಕೋಟಿ ಅನುದಾನ ತಂದು ಮಳವಳ್ಳಿ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ದಿ ಪಡಿಸಿರುವ ಪಿ.ಎಂ ನರೇಂದ್ರಸ್ವಾಮಿ ಅವರ ವಿರುದ್ದ ಅಭಿವೃದ್ದಿ ಶೂನ್ಯ ಎಂದು ಸುಳ್ಳು ಸುದ್ದಿ ಹರಡಲಾಗುತ್ತಿದೆ, ಪಿ.ಎಂ ನರೇಂದ್ರಸ್ವಾಮಿ ಅವರ ಬಗ್ಗೆ ಜನಾಭಿಪ್ರಾಯ ಮೂಡುತ್ತಿರುವ ಹಿನ್ನೆಲೆಯಲ್ಲಿ ಸಹಿಸದ ಕೆಲವರು ಸಲ್ಲದ ಅಪ ಪ್ರಚಾರ ಮಾಡಿಸುತ್ತಿದ್ದಾರೆ.

ಯೂಟ್ಯೂಬ್ ಚಾನಲ್‌ನವರು ಯಾವುದು ಸತ್ಯ ಯಾವುದು ಸುಳ್ಳು ಎನ್ನುವುದನ್ನು ಮನವರಿಕೆ ಮಾಡಿಕೊಂಡು ಸುದ್ದಿ ಹಾಕದೇ ಏಕಪಕ್ಷೀಯವಾಗಿ ಸುದ್ದಿ ಮಾಡಿದ್ದಾರೆ, ಸಾರ್ವಜನಿಕರು ಮತ್ತು ಕಾಂಗ್ರೆಸ್ ಕಾಯ೯ಕತ೯ರು ಗೊಂದಲಕ್ಕೆ ಒಳಗಾಗಬಾರದು, ಸುಳ್ಳು ಸುದ್ದಿ ಹರಡಿರುವ ಚಾನಲ್ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಡಿವೈಎಸ್‌ಪಿ ಅಧಿಕಾರಿಗಳಿಗೆ ದೂರು ನೀಡಿದ್ದು, ಚಾನೆಲ್ ವಿರುದ್ದ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು, ಮುಂದಿನ ದಿನಗಳಲ್ಲಿ ಪಿತೂರಿ ನಡೆಸುತ್ತಿರುವವರಿಗೆ ತಕ್ಕ ಉತ್ತರವನ್ನು ಕಾಂಗ್ರೆಸ್ ಪಕ್ಷ ನೀಡಲಿದೆ ಎಂದರು.

ಇದೇ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ, ಮುಖಂಡರಾದ ಶಾಂತರಾಜು, ದಿಲೀಪ್ ಕುಮಾರ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ