Thursday, November 19, 2026

ಪ್ರಾಯೋಗಿಕ ಆವೃತ್ತಿ

ಡಿ.24 ರಂದು ರಾಷ್ಟೀಯ ಗ್ರಾಹಕರ ದಿನಾಚರಣೆ : ಹೆಚ್. ಕೃಷ್ಣ

ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 24 ರಂದು ರಾಷ್ಟೀಯ ಗ್ರಾಹಕರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದೂ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಿ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಹೆಚ್. ಕೃಷ್ಣ ಅವರು ತಿಳಿಸಿದರು.

ಮಂಡ್ಯದ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಆಹಾರದ ಮೌಲ್ಯ ಮತ್ತು ಆಹಾರದ ಮಹತ್ವ ಕುರಿತು ಅರಿವು ಮೂಡಿಸಬೇಕಾಗಿದೆ. ಪ್ರಮುಖವಾಗಿ ವಿದ್ಯಾರ್ಥಿನಿಲಯಗಳಲ್ಲಿ, ಮದುವೆ, ಸಮಾರಂಭಗಳಲ್ಲಿ ಮಕ್ಕಳು ಮತ್ತು ಸಾರ್ವಜನಿಕರು ಹೆಚ್ಚಾಗಿ ಆಹಾರ ವ್ಯರ್ಥ ಮಾಡುವುದು ಕಂಡು ಬಂದಿದ್ದು, ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಇತರೆ ಜಿಲ್ಲೆಗಳಿಗೆ ಮಾದರಿಯಾಗುವಂತೆ ಮಂಡ್ಯ ಜಿಲ್ಲೆಯಲ್ಲಿ ಆಹಾರ ಜಾಗೃತಿಯನ್ನು ಮೂಡಿಸಬೇಕು. ಅಧಿಕಾರಿಗಳು ರಾಷ್ಟೀಯ ಗ್ರಾಹಕರ ದಿನಾಚರಣೆ ಹಾಗೂ ಆಹಾರ ಜಾಗೃತಿ ಕಾರ್ಯಕ್ರಮ ಯಶಸ್ವಿಗೊಳಿಸಲು ಉತ್ತಮ ಕೆಲಸ ನಿರ್ವಹಿಸಿ ಹಾಗೂ ಈ ಕುರಿತು ಮುಂದಿನ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು ಎಲ್ಲರೂ ಸಿದ್ಧತೆ ಮಾಡಿಕೊಳ್ಳಿ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಆಹಾರದ ಮಹತ್ವ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದ್ದು, ಕಾರ್ಯಕ್ರಮದಲ್ಲಿ ಶಾಲಾ, ಕಾಲೇಜು ಹಾಗೂ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳನ್ನು ಆಹ್ವಾನಿ ಎಂದು ತಿಳಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಪ್ರತೀಕ್ ಹೆಗ್ಡೆ, ಸಹಾಯಕ ನಿರ್ದೇಶಕ ಶ್ರೀನಿವಾಸ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಕಾವ್ಯಶ್ರೀ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಚಂದ್ರಕಾಂತ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೋಮಲ್ ಕುಮಾರ್ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾಧಿಕಾರಿ ಮಂಜುಳಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ