Friday, November 20, 2026

ಪ್ರಾಯೋಗಿಕ ಆವೃತ್ತಿ

ನೈಸರ್ಗಿಕ ಗೌರಿ ಗಣೇಶ ಮೂರ್ತಿಯೊಂದಿಗೆ ಹಬ್ಬ ಆಚರಿಸಿ; ಡಾ.ಕುಮಾರ

ಮಂಡ್ಯ ಜಿಲ್ಲೆಯ ಸಾರ್ವಜನಿಕರು ಗೌರಿ ಗಣೇಶ ಹಬ್ಬಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಈ ಬಾರಿ ಬಣ್ಣರಹಿತ ಮಣ್ಣಿನ ನೈಸರ್ಗಿಕ ಗೌರಿ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದ್ದಾರೆ.

ಪರಿಸರವನ್ನು ಸಂರಕ್ಷಿಣೆಗಾಗಿ ಹಬ್ಬದ ನಂತರ ಬಣ್ಣ ರಹಿತ ಮಣ್ಣಿನ ನೈಸರ್ಗಿಕ ಗೌರಿ ಗಣೇಶ ಮೂರ್ತಿಗಳನ್ನು ನಗರಸಭೆ, ಪುರಸಭೆ ವತಿಯಿಂದ ನಿಗಧಿಪಡಿಸಿರುವ ಸ್ಥಳಗಳಲ್ಲಿ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸುವುದು.

ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ನಗರಸಭೆ / ಪುರಸಭೆಯ ಕಸ ಸಂಗ್ರಹಣ ವಾಹನಕ್ಕೆ ನೀಡಿ ಎಂದರು.

ಜಲಚರಗಳ ಜೀವಕ್ಕೆ ಅಪಾಯ

ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು, ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೆ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ.
ಸಾರ್ವಜನಿಕ ಆರೋಗ್ಯಕ್ಕೆ ದಕ್ಕೆ ಉಂಟಾಗುತ್ತದೆ.

ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯು ಗೌರಿ-ಗಣೇಶ‌ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ದಿನಾಂಕ 20-07-2016 ರಂದು ಅಧಿಸೂಚನೆಯನ್ನು ಹೊರಡಿಸಿದ್ದು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನೂ ಮುಂದೆ ರಾಜ್ಯದ ಯಾವುದೇ ಕರೆ ಮತ್ತು ಇತರೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕಾಗಿ ಕೋರಿದೆ.

ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ / ಸಂಸ್ಥೆಗಳಿಗೆ ವ್ಯಾಪಾರ ಲೈಸನ್ಸ್‌ ನೀಡದಿರಲು ಮತ್ತು ಲೈಸನ್ಸ್ ಪಡೆಯದೆ ಅನಧಿಕೃತವಾಗಿ ತಯಾರಿ | ಮಾರಾಟ ಮಾಡುವ ವ್ಯಕ್ತಿ | ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು.

ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಗ್ಗೆ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ ಮಂಡಳಿಯ ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂರ್ತಣ) ಕಾಯ್ದೆ 1974ರ ಪ್ರಕಾರ ಕಲಂ 33(ಎ) ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಅಪ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಐ.ಪಿ.ಎಸ್ ಸಕ್ಷನ್ 1860 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹ ನಿಷೇಧ

ಉಚ್ಚ ನ್ಯಾಯಾಲಯ ಆದೇಶ ದಿನಾಂಕ: 18-10-2019 ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆಯಂತೆ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನೂ ಮುಂದೆ ರಾಜ್ಯದ ಯಾವುದೇ ಕರೆ ಮತ್ತು ಇತರೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ / ಸಂಸ್ಥೆಗಳಿಗೆ ವ್ಯಾಪಾರ ಲೈಸನ್ಸ್ ನೀಡದಿರಲು ಮತ್ತು ಲೈಸನ್ಸ್ ಪಡೆಯದೆ ಅನಧಿಕೃತವಾಗಿ ತಯಾರಿ / ಮಾರಾಟ ಮಾಡುವ ವ್ಯಕ್ತಿ / ಸಂಸ್ಥೆಗಳ ಮೇಲೆ ಕಾನೂನು ಕ್ರಮಗಳನ್ನು ತಕ್ಷಣ ಜರುಗಿಸಲಾಗುವುದು.

ಪ್ಲಾಸ್ಟರ್ ಆಫ್ ಪ್ಯಾರಿಸ್ / ಬಣ್ಣ ಲೇಪಿತ ವಿಗ್ರಹಗಳನ್ನು ಯಾವುದೇ ನದಿ ಕಾಲುವೆ ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐ.ಪಿ.ಎಸ್ ಸೇಕ್ಷನ್ 1860 ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.

ವಾರ್ಡ್ ಮಟ್ಟದಲ್ಲಿ ಪೆÇಲೀಸರ ಸಹಯೋಗದೊಂದಿಗೆ ಸಮಿತಿಗಳನ್ನು ರಚಿಸಿ ಗಣೇಶ ವಿಗ್ರಹಗಳ ಸೂಕ್ತ ವಿಲೇವಾರಿಗೆ ಕ್ರಮ ಕೈಗೊಳ್ಳುವುದು. ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ನಗರಸಭೆ / ಪುರಸಭೆ / ಪಟ್ಟಣ ಪಂಚಾಯಿತಿ / ಗ್ರಾಮಪಂಚಾಯಿತಿ. ಮುತ್ತು ಪೆÇಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಯನ್ನು ಪಡೆದ ನಂತರವೇ ಸ್ಥಾಪಿಸುವುದು.

ನಿರ್ಧಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಯನ್ನು ವಿಲೇವಾರಿ ಮಾಡಲು ನಿರ್ಧಿಷ್ಟ ಜಲ ಮೂಲಗಳನ್ನು ನಿಗದಿಪಡಿಸಿ ಪ್ರಕಟಣೆಯನ್ನು ಹೊರಡಿಸುವುದು. ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಿ.ಒ.ಪಿ ಮತ್ತು ಬಣ್ಣದ ವಿಗ್ರಹಗಳನ್ನು ತನಿಖೆ ಮಾಡಿ ಸುಪರ್ಧಿಗೆ ತೆಗೆದುಕೊಳ್ಳಲು ಕ್ರಮವಹಿಸುವುದು. ಜಿಲ್ಲೆ ಅಥವಾ ತಾಲ್ಲೂಕುಗಳಿಗೆ ಬೇರೆ ಸ್ಥಳಗಳಿಂದ ಬರುವಂತಹ ಪಿ.ಒ.ಪಿ ವಿಗ್ರಹಗಳನ್ನು ತಡೆಗಟ್ಟಲು ಸಂಬಂಧಿಸಿದ ಚೆಕ್ ಪೆÇೀಸ್ಟ್ ಅಧಿಕಾರಿಗಳನ್ನು ನೇಮಕ ಮಾಡಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ