ಮಂಡ್ಯದ ಕನ್ನಿಕಾ ಶಿಲ್ಪ ನವೋದಯ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ಪುನರ್ವಿ ಎನ್.ಗೌಡ ನವೋದಯ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ (ದಕ್ಷಿಣ ವಲಯ) ಪ್ರಧಾನ ಕಾರ್ಯದರ್ಶಿ ಡಿ.ಎನ್. ನಂದೀಶ್ ಹಾಗೂ ಹೆಚ್.ಜೆ. ತೇಜಶ್ವಿನಿ ದಂಪತಿ ಪುತ್ರಿ ಪುನರ್ವಿ ಎನ್. ಗೌಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವ ಮೂಲಕ ತರಬೇತಿ ಪಡೆದ ಕನ್ನಿಕಾ ಶಿಲ್ಪ ನವೋದಯ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
2022-23ನೇ ಸಾಲಿನ ನವೋದಯ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಕನ್ನಿಕ ಶಿಲ್ಪ ನವೋದಯ ತರಬೇತಿ ಸಂಸ್ಥೆಯ 30 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪುನರ್ವಿ ಎನ್. ಗೌಡ ಅವರನ್ನು ಕನ್ನಿಕ ಶಿಲ್ಪ ನವೋದಯ ತರಬೇತಿ ಸಂಸ್ಥೆ ಮುಖ್ಯಸ್ಥೆ ಕನ್ನಿಕ ಅಭಿನಂದಿಸಿದ್ದಾರೆ.