Thursday, September 19, 2024

ಪ್ರಾಯೋಗಿಕ ಆವೃತ್ತಿ

ರೈತರೊಂದಿಗೆ ಸಂಧಾನ ಸಫಲ : ಕೇಂದ್ರ ಸಚಿವ ಅಮಿತ್ ಶಾರ ಭೇಟಿ ಮಾಡಿಸುವುದಾಗಿ ಸಚಿವ ಕೆ.ಗೋಪಾಲಯ್ಯ ಭರವಸೆ

ಮಂಡ್ಯ ಜಿಲ್ಲೆಗೆ ನಾಳೆ ಭೇಟಿ ನೀಡಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಬೇಡಿಕೆಗಳನ್ನು ಕೇಂದ್ರ ಸಚಿವ ಅಮಿತ್ ಶಾ ಮುಂದೆ ಹೇಳಿಕೊಳ್ಳಲು ಐದು ಜನ ರೈತರಿಗೆ ಅವಕಾಶ ಮಾಡಿಕೊಡುತ್ತೇನೆ ಎಂದು ಸಚಿವ ಕೆ.ಗೋಪಾಲಯ್ಯ ಭರವಸೆ ನೀಡಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರೈತ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ನಾವೆಲ್ಲರೂ ರೈತ ಕುಟುಂಬದಲ್ಲಿ ಹುಟ್ಟಿ ಬೆಳೆದವರು. ರೈತರ ಸಮಸ್ಯೆಗಳನ್ನು ಕುರಿತು ಜನವರಿ 7ರೊಳಗೆ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿ ರಾಜ್ಯ ಸರ್ಕಾರದಿಂದ ಬಗೆಹರಿಸುವಂತಹ ಸಮಸ್ಯೆಗಳನ್ನು ಬಗೆಹರಿಸಿ ಕೊಡುತ್ತೇವೆ ಎಂದು ಹೇಳಿದರು.

ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡ್ಯ ಜಿಲ್ಲೆಗೆ ಆಗಮಿಸಿ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಂದರ್ಭದಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಸಚಿವರ ಮುಂದೆ ಹೇಳಿಕೊಳ್ಳಲು ಅವಕಾಶ ಮಾಡಿಕೊಡುತ್ತೇನೆ ಎಂದು ರೈತರಿಗೆ ಭರವಸೆ ನೀಡಿದರು.

ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್, ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ರೈತಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್, ದಸಂಸ ನಾಯಕ ಗುರುಪ್ರಸಾದ್ ಕೆರಗೋಡು, ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ,ಜಿಲ್ಲಾಧ್ಯಕ್ಷ ಕೆಂಪೂಗೌಡ ರೈತ ನಾಯಕರಾದ ಮಧು ಚಂದನ್, ಪ್ರಸನ್ನ ಗೌಡ,ಲಿಂಗಪ್ಪಾಜಿ,,ಸೇರಿದಂತೆ ಇತರರು ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!