ಮಳವಳ್ಳಿ ಪುರಸಭೆ ನೂತನ ಉಪಾಧ್ಯಕ್ಷರಾಗಿ ಜೆಡಿಎಸ್ ಸದಸ್ಯ ಎಂ.ಟಿ.ಪ್ರಶಾಂತ್ ಅವಿರೋಧವಾಗಿ ಆಯ್ಕೆಯಾದರು.
ಟಿ.ನಂದಕುಮಾರ್ ಅವರ ರಾಜೀನಾಮೆಯಿಂದ ತೆರವಾದ ಉಪ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಎಂ.ಟಿ.ಪ್ರಶಾಂತ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಚುನಾವಣಾ ಅಧಿಕಾರಿ ತಹಶೀಲ್ದಾರ್ ಎಂ.ವಿಜಯಣ್ಣ, ಪ್ರಶಾಂತ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.
ಶಾಸಕ ಡಾ.ಕೆ.ಅನ್ನದಾನಿ ನೂತನ ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಸದಸ್ಯರ ಜೊತೆಗೆ ಬಿಜೆಪಿ ಮತ್ತು ಪಕ್ಷೇತರ ಸದಸ್ಯರ ಸಹಕಾರ ನೀಡಿ ಜೆಡಿಎಸ್ ಸದಸ್ಯ ಎಂ.ಟಿ.ಪ್ರಶಾಂತ್ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಪಟ್ಟಣಕ್ಕೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಕಳೆದ ನಾಲ್ಕು ವರ್ಷಗಳಿಂದ ಕೋಟ್ಯಾಂತರ ರೂ ಅನುದಾನ ತಂದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಯನ್ನು ಮಾಡಲಾಗಿದೆ.
ಮಾಧವ ಮಂತ್ರಿ ನಾಲೆ ಅಭಿವೃದ್ದಿ ಪಡಿಸುವ ಹೊಸ ಸರ್ಕಾರಕ್ಕೆ ಪತ್ರ ಬರೆದು ಅನುದಾನವನ್ನು ನಾನು ಬಿಡುಗಡೆ ಮಾಡಿದ್ದೇನೆ. ಆದರೆ ಮಾಜಿ ಸಚಿವ ಸೋಮಶೇಖರ್ ಅವರು ತಾವು ತಂದ ರಹಿತ ಹೇಳಿಕೆ ನೀಡಿರುವುದು ಸತ್ಯಕ್ಕೆ ದೂರವಾಗಿದೆ, ತಾಲೂಕಿನಲ್ಲಿ ಭ್ರಷ್ಟಾಚಾರದ ಆಡಳಿತ ನಡೆಸುತ್ತಿದೆ. ಭ್ರಷ್ಟಚಾರ ಪಡಿಸಿದರೇ ತಾನು ಜವಾಬ್ದಾರಿಯಾಗುತ್ತೇನೆಂದು ಹೇಳಿದರು.
ಕಾಮಗಾರಿಗಳಲ್ಲಿ ಯಾರು ಕಮೀಷನ್ ತೆಗೆದುಕೊಳ್ಳುತ್ತಿದ್ದಾರೆಂದು ಇಡೀ ರಾಜ್ಯಕ್ಕೆ ಗೊತ್ತಾಗಿದೆ, ನಾವು ಬಿಡಿಸಿ ಹೇಳಬೇಕಾಗಿಲ್ಲ ಎಂದು ವ್ಯಂಗ್ಯವಾಡಿದರು.
ನೂತನ ಉಪಾಧ್ಯಕ್ಷ ಪ್ರಶಾಂತ್ ಮಾತನಾಡಿ, ಶಾಸಕರು, ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರ ಸಲಹೆ ಸಹಕಾರದೊಂದಿಗೆ ಪುರಸಭೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ.
ನಗರಸಭೆ ಅಧ್ಯಕ್ಷೆ ರಾಧಾ ನಾಗರಾಜು, ಮುಖ್ಯಾಧಿಕಾರಿ ಹರಿಪ್ರಸಾದ್, ಸ್ಥಾಯಿ ಸಮಿತಿ ಅಧ್ಯಕ್ಷ ಪುಟ್ಟಸ್ವಾಮಿ, ಸದಸ್ಯರಾದ ಟಿ.ನಂದಕುಮಾರ್, ನೂರುಲ್ಲಾ, ಸಿದ್ದರಾಜು, ರವಿ, ಎಂ.ಎನ್.ಕೃಷ್ಣ, ಪ್ರಮೀಳಾ, ಇಂದ್ರಮ್ಮ, ಕುಮಾರ್, ನಾಗೇಶ್, ಮಾಜಿ ಅಧ್ಯಕ್ಷ ದೊಡ್ಡಯ್ಯ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲೇಗೌಡ, ಮುಖಂಡರಾದ ಶಂಕರೇಗೌಡ , ಸಿದ್ದಾಚಾರಿ, ನಾಗರಾಜು, ನಾರಾಯಣ ಸೇರಿದಂತೆ ಇತರರು.
ಇದನ್ನು ಓದಿ: ವಿಷಾನಿಲ ಸೋರಿಕೆ : ವಾರದೊಳಗೆ ವರದಿ ಸಲ್ಲಿಸಲು ಡಿಸಿ ಸೂಚನೆ