Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜಿಲ್ಲಾ ಪಂಚಾಯಿತಿ ನೂತನ ಸಿಇಓ ನಂದಿನಿ ಕೆ.ಆರ್

ಮಂಡ್ಯ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯನ್ನಾಗಿ 2017 ನೇ ಬ್ಯಾಚಿನ ಐಎಎಸ್ ಅಧಿಕಾರಿ ನಂದಿನಿ ಕೆ.ಆರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ ನಂದಿನಿಯರನ್ನು ಮಂಡ್ಯ ಜಿ.ಪಂ.ಗೆ ವರ್ಗಾವಣೆ ಮಾಡಿ ಸರ್ಕಾರದ ಆಧೀನ ಕಾರ್ಯದರ್ಶಿ ಟಿ.ಮಹಂತೇಶ್ ಆದೇಶ ಹೊರಡಿಸಿದ್ದಾರೆ.

ನಂದಿನಿಯವರು ಕರ್ನಾಟಕದ ಕೋಲಾರ ಜಿಲ್ಲೆಯರಾಗಿದ್ದು, ಬೆಂಗಳೂರಿನ ಎಂಎಸ್ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಸಿವಿಲ್ ಎಂಜಿನಿಯರಿಂಗ್ ಪದವೀಧರೆಯಾಗಿದ್ದಾರೆ. 2014ರಲ್ಲಿ ನಾಗರಿಕ ಸೇವಾ ಪರೀಕ್ಷೆ ಬರೆದು 849 ರ್‍ಯಾಂಕ್ ಗಳಿಸಿ, ಐ.ಆರ್.ಎಸ್(ಕಸ್ಟಮ್ಸ್ ಮತ್ತು ಸೆಂಟ್ರಲ್ ಅಬಕಾರಿ) ಸೇವೆಗೆ ಆಯ್ಕೆಯಾಗಿದ್ದರು.

ನಂತರ ನಾಲ್ಕನೇ ಪ್ರಯತ್ನದಲ್ಲಿ ಕನ್ನಡ ಸಾಹಿತ್ಯವನ್ನು ಐಚ್ಛಿಕ ವಿಷಯವಾಗಿಟ್ಟುಕೊಂಡು ಅಧ್ಯಯನ ಮಾಡಿದ ಅವರು, 2017ರಲ್ಲಿ ಐಎಎಸ್ ಟಾಪರ್ ಆಗಿ ಉತ್ತಿರ್ಣರಾಗಿದ್ದರು. ಸಾಹಿತ್ಯ ಓದುವುದು ಮತ್ತು ವಾಲಿಬಾಲ್ ಆಡುವುದು ಇವರ ಮುಖ್ಯ ಹವ್ಯಾಸಗಳಾಗಿವೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ