Wednesday, September 11, 2024

ಪ್ರಾಯೋಗಿಕ ಆವೃತ್ತಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ‌್ಕರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

ರಾಜ್ಯ ಸರಕಾರವು ಹೇಮಂತ್ ನಿಂಬಾಳ್ಕರ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿ ಮಂಗಳವಾರ ಸಂಜೆ ಆದೇಶ ಹೊರಡಿಸಿತ್ತು. 1998ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ನಿಂಬಾಳ‌್ಕರ್ ಅವರು ಪೊಲೀಸ್ ಇಲಾಖೆಯ ವಿವಿಧ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ತಮ್ಮ ಸೇವಾ ಅವಧಿಯಲ್ಲಿ ಎಲ್ಲೆಡೆ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಹೇಮಂತ್ ನಿಂಬಾಳ್ಕರ್ ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು. ಇಲಾಖೆಯ ಅಧಿಕಾರಿಗಳು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ನಂತರ ಆಯುಕ್ತರು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!