Friday, September 20, 2024

ಪ್ರಾಯೋಗಿಕ ಆವೃತ್ತಿ

ನಿಡಘಟ್ಟ ಚೆಕ್ ಪೋಸ್ಟ್ ಬಳಿ ಅಪಘಾತ : ಕೂದಲೆಳೆ ಅಂತರದಿಂದ ಪಾರಾದ ಚುನಾವಣಾ ಸಿಬ್ಬಂದಿಗಳು

ಜಿಲ್ಲೆಯ ಗಡಿ ಭಾಗ ಮದ್ದೂರು ತಾಲ್ಲೂಕಿನ ನಿಡಘಟ್ಟ ಚೆಕ್ ಪೋಸ್ಟ್ ಬಳಿ ಅಪಘಾತ ಸಂಭವಿಸಿದ್ದು, ಚುನಾವಣಾ ಸಿಬ್ಬಂದಿಗಳು ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ.

ಸೋಮವಾರ ಬೆಳಿಗ್ಗೆ 6 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಇಬ್ಬರು ಕಾರು ಚಾಲಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿ ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ನಿಡಘಟ್ಟ ಗಡಿ ಭಾಗದಲ್ಲಿ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ರಸ್ತೆಯಲ್ಲಿ ಜಿಲ್ಲಾಡಳಿತ ‌ಚೆಕ್ ಪೋಸ್ಟ್ ನಿರ್ಮಾಣ ಮಾಡಿದೆ.

ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿ ಎಂದಿನಂತೆ ವಾಹನಗಳನ್ನು ತಪಾಸಣಾ ಕಾರ್ಯದಲ್ಲಿ ತೊಡಗಿದ್ದ ವೇಳೆ‌ ಬೆಂಗಳೂರಿನಿಂದ ವೇಗವಾಗಿ ಬಂದ ಸ್ವೀಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಮಾರುತಿ ಜೆನ್ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಬಳಿಕ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ರಸ್ತೆ ವಿಭಜಕದ ಮೇಲೆ ಹೋಗಿ ನಿಂತಿದೆ. ಡಿಕ್ಕಿಯ ರಭಸಕ್ಕೆ ಬ್ಯಾರಿಕೇಡ್ ಗಳು ಸಂಪೂರ್ಣವಾಗಿ ಜಖಂಗೊಂಡಿದ್ದು, ಚುನಾವಣಾ ಸಿಬ್ಬಂದಿಗಳು ಕೂದಲೆಳೆ ಅಂತರದಿಂದ ಬದುಕುಳಿದಿದ್ದಾರೆ.

ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ರಸ್ತೆಯಲ್ಲಿ ಚೆಕ್ ಪೋಸ್ಟ್ ನಿರ್ಮಾಣದಿಂದ ಚುನಾವಣಾ ಸಿಬ್ಬಂದಿಗಳು ಭಯಭೀತರಾಗಿ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯ ಎದುರಾಗಿದೆ. ಕಳೆದೊಂದು ವಾರದೊಳಗೆ ಎರಡು ಮೂರು ಬಾರಿ ಇದೇ ರೀತಿಯ ಪ್ರಕರಣಗಳು ನಡೆದಿವೆ. ರಸ್ತೆಯಲ್ಲಿ ಅತೀ ವೇಗವಾಗಿ ಬರುವ ವಾಹನಗಳು ನಿಯಂತ್ರಣ ತಪ್ಪಿ ಇಂತಹ ಘಟನೆಗಳು ನಡೆಯುತ್ತಿವೆ. ಹೀಗಾಗಿ ಚುನಾವಣೆ ಮುಗಿಯುವವರೆಗೂ ಹೆದ್ದಾರಿ ಪ್ರಾಧಿಕಾರ ರಸ್ತೆಗೆ ಹಂಪ್ಸ್ ನಿರ್ಮಾಣ ಮಾಡುವಂತೆ ಸಾರ್ವಜನಿಕರ ಆಗ್ರಹವಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!