Thursday, November 19, 2026

ಪ್ರಾಯೋಗಿಕ ಆವೃತ್ತಿ

ನಿಖಿಲ್ ಸ್ಪರ್ಧೆ ಮಾಡಲ್ಲ: ಹೆಚ್ಡಿಕೆ

ನಿಖಿಲ್ ಕುಮಾರಸ್ವಾಮಿ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಾರೆ ಅಂತ ಯಾರು ಹೇಳಿದ್ರು ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಮದ್ದೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಿಖಿಲ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ.ಸುಮಾರು 20 ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಲು ನಿಖಿಲ್ ಕುಮಾರಸ್ವಾಮಿ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದರು.

ಹಾರಿಕೆಯ ಉತ್ತರ ಕೊಟ್ಟ ಹೆಚ್ಡಿಕೆ

ಕನ್ನಂಬಾಡಿ ಜಲಾಶಯ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಬೇಕಾ ಬೇಡವಾ ಎಂಬ ಬಗ್ಗೆ ನನಗೆ ಗೊತ್ತಿಲ್ಲ ಎಂದು ಟ್ರಯಲ್ ಬ್ಲಾಸ್ಟ್ ವಿಚಾರದಲ್ಲಿ ಹಾರಿಕೆಯ ಉತ್ತರ ನೀಡಿದರು.

ಟ್ರಯಲ್ ಬ್ಲಾಸ್ಟ್ ನಡೆಸೋದನ್ನ ಸರ್ಕಾರ ನಿಲ್ಲಿಸಿದೆ.ಅಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂಬುದು ನನಗೆ ಗೊತ್ತಿಲ್ಲ. ಟ್ರಯಲ್ ಬ್ಲಾಸ್ಟ್ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ.ಜಲಾಶಯಕ್ಕೆ ಧಕ್ಕೆ ಆಗುವ ಆತಂಕದಲ್ಲಿ ರೈತರು ಪ್ರತಿಭಟನೆ ಮಾಡಿದ್ದಾರೆ. ಪರಿಸ್ಥಿತಿ, ವಾಸ್ತವಾಂಶ ತಿಳಿದುಕೊಂಡು ಸರ್ಕಾರ ಟ್ರಯಲ್ ಬ್ಲಾಸ್ಟ್ ಬಗ್ಗೆ ತೀರ್ಮಾನ ಮಾಡಬೇಕು.ಎಂದರು.

ಒಕ್ಕಲಿಗ ಸಿಎಂ ವಿಚಾರ

ಒಕ್ಕಲಿಗರ ನಾಯಕ ಯಾರು ಎಂದು ಜನ ತೀರ್ಮಾನ ಮಾಡ್ತಾರೆ ಹೊರತು ಕಾಂಗ್ರೆಸ್ ಮುಖಂಡರಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಶಾಸಕ ಡಿ.ಸಿ. ತಮ್ಮಣ್ಣ,ಮಾದನಾಯಕನಹಳ್ಳಿ ರಾಜಣ್ಣ, ಶೇಖರ್, ರಾಮಕೃಷ್ಣ, ಮಹೇಂದ್ರ, ರಾಮಣ್ಣ, ಮಹದೇವು ಇತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ