Thursday, November 19, 2026

ಪ್ರಾಯೋಗಿಕ ಆವೃತ್ತಿ

ತಳಮಟ್ಟದಿಂದಲೇ ಜೆಡಿಎಸ್ ಸಂಘಟನೆ : ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಪಕ್ಷವನ್ನು ತಳಮಟ್ಟದಿಂದಲೇ ಸಂಘಟಿಸುವ ಉದ್ದೇಶ ದಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಡಿಜಿಟಲ್ ಸದಸ್ಯತ್ವ ನೊಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಮಳವಳ್ಳಿ ಪಟ್ಟಣದ ಶಾಂತಿ ಸಮುದಾಯ ಭವನದಲ್ಲಿ ನಡೆದ ಜನತಾದಳ ಡಿಜಿಟಲ್ ಸದಸ್ಯತ್ವ ನೊಂದಣಿ ಅಭಿನಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜೆಡಿಎಸ್ ಪಕ್ಷದ ಕೆಳ ಮಟ್ಟದಲ್ಲಿ ಸಂಘಟಿಸುವ ಉದ್ದೇಶದಿಂದ ಸ್ಥಳೀಯ ಸಂಸ್ಥೆ ಚುನಾವಣೆಗೆ ಇಂದಿನಿಂದಲೇ ಜೆಡಿಎಸ್ ಕಾರ್ಯಕರ್ತರು ಪಕ್ಷ ಸಂಘಟನೆಗ ಮುಂದಾಗಬೇಕು ಜೆಡಿಎಸ್ ಕಾರ್ಯಕರ್ತರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತೇನೆ ಯಾವುದೇ ಹೋರಾಟಕ್ಕೂ ಸಿದ್ಧರಿತ್ತು ಮಂಡ್ಯ ಜಿಲ್ಲೆಯ ಜನರ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಮಾಜಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಪೊಲೀಸ್ ಇಲಾಖೆಯಿಂದ ಜೆಡಿಎಸ್ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ದೌರ್ಜನ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಮಾಜಿ ಶಾಸಕ ಸುರೇಶ್ ಗೌಡ ಮಾತನಾಡಿ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಗೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ ಕಾಂಗ್ರೆಸ್ ಪಕ್ಷದ ಕೊಡುಗೆ ಶೂನ್ಯ ಕೇವಲ ಕಮಿಷನ್ ಗಾಗಿ ಕಾಮಗಾರಿಯನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಜೆಡಿಎಸ್ ಕಾರ್ಯಕರ್ತರು ಯುವನಾಯಕ ನಿಖಿಲ್ ಕುಮಾರಸ್ವಾಮಿ ಅವರನ್ನು ಪಟ್ಟಣದ ದಂಡಿನ ಮಾರಮ್ಮ ದೇವಸ್ಥಾನ ದಿಂದ ಶಾಂತಿ ಸಮುದಾಯದವರೆಗೂ ಬೈಕ್ ರ್ಯಾಲಿ ಮೂಲಕ ನಿಖಿಲ್ ಕುಮಾರಸ್ವಾಮಿ ಅವರನ್ನು ಕರೆತರಲಾಯಿತು.

ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ್, ಯುವ ಘಟಕದ ಜಿಲ್ಲಾಧ್ಯಕ್ಷ ರವಿ ಕಂಸಾಗರ, ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷ ಜಯರಾಮ್, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ವಿಶ್ವನಾಥ್, ಮನ್ ಮುಲ್ ಮಾಜಿ ನಿರ್ದೇಶಕ ರಾಮಚಂದ್ರ, ಪುರಸಭೆ ಉಪಾಧ್ಯಕ್ಷ ಬಸವರಾಜು, ಸದಸ್ಯರಾದ ನಂದ ಕುಮಾರ್, ಪ್ರಶಾಂತ್, ಸಿದ್ದರಾಜು, ನಾಗೇಶ್ ಸೇರಿದಂತೆ ಇತರರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ