Friday, June 21, 2024

ಪ್ರಾಯೋಗಿಕ ಆವೃತ್ತಿ

ರೈತರ ಸಾಲಮನ್ನಾ ಮಾಡಿದ ಹೆಚ್.ಡಿ ಕುಮಾರಸ್ವಾಮಿ ಬೆಂಬಲಿಸಿ: ನಿಖಿಲ್

ಗ್ರಾಮ ವಾಸ್ತವ್ಯದ ಮೂಲಕ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಿದ, ನುಡಿದಂತೆ ರೈತರ ಸಾಲ ಮನ್ನಾ ಮಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಮಂಡ್ಯ ಜಿಲ್ಲೆಯ ಜನತೆ ಕೈ ಹಿಡಿಯಬೇಕೆಂದು ರಾಜ್ಯ ಜಾ.ದಳ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.

ಮಂಡ್ಯ ತಾಲ್ಲೂಕಿನ ಹಳೇಬೂದನೂರು, ಹೊಸಬೂದನೂರು, ಶ್ರೀನಿವಾಸಪುರ, ಚಿಕ್ಕಮಂಡ್ಯ, ಸಾತನೂರು ಗ್ರಾಮಗಳಲ್ಲಿ ರೋಡ್ ಶೋ ನಡೆಸುವ ಮೂಲಕ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರ ಪರ ಮತಯಾಚಿಸಿ, ಜಿಲ್ಲೆಯ ಅಭಿವೃದ್ಧಿ ಹಾಗೂ ಕಾವೇರಿ ಉಳಿವಿಗಾಗಿ ಕುಮಾರಣ್ಣನನ್ನು ಗೆಲ್ಲಿಸಿ ಎಂದು ಕೋರಿದರು.

ನಾಡಿನ ಜನರ ಜೀವ ನದಿ ಕಾವೇರಿ ನದಿಗೆ ಮೇಕೆದಾಟು ಅಣೆಕಟ್ಟು ಕಟ್ಟುತ್ತೇವೆ ಎಂದು ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆ ಬಗ್ಗೆ `ನಮ್ಮ ನೀರು ನಮ್ಮ ಹಕ್ಕು’ ಘೋಷ ವಾಕ್ಯ ಮೊಳಗಿಸಿದ್ದರು. ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ನಾಡಿನ ಜನರ ಮೇಲೆ ಕಿಂಚಿತ್ತು ಕಾಳಜಿ ಇದ್ದರೆ `ಇಂಡಿಯ’ ಮೈತ್ರಿಕೂಟದಲ್ಲಿರುವ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಜೊತೆ ಮಾತನಾಡಿ ಮೇಕೆದಾಟು ಅಣೆಕಟ್ಟೆಯನ್ನ ಕಟ್ಟುವ ಮೂಲಕ ತಮ್ಮ ಬದ್ಧತೆ ತೋರಿಸಬೇಕಿದೆ, ಪೊಳ್ಳು ಹೋರಾಟ ಮಾಡುವುದಲ್ಲ ಎಂದು ಛೇಡಿಸಿದರು.

ರೈತಪರ, ಜನಪರ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿದ್ದು, ಜನತೆ ಹೆಚ್ಚು ಬಹುಮತ ನೀಡುವ ಮೂಲಕ ಗೆಲ್ಲಿಸಬೇಕು. ಸದಾ ರೈತರ ಒಳಿತಿಗಾಗಿ ಯೋಚಿಸುವ ಮಣ್ಣಿನ ಮಗ ಕುಮಾರಣ್ಣ ಅವರು ರೈತರ ಬೆಂಗಾವಲಾಗಿ ಇರುತ್ತಾರೆ. ದಯ ಮಾಡಿ ಗೆಲ್ಲಿಸಿಕೊಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್. ರಾಮಚಂದ್ರ, ಉಪಾಧ್ಯಕ್ಷ ಎಂ.ಎಸ್. ರಘುನಂದನ್, ತಾಲ್ಲೂಕು ಜಾ.ದಳ ಅಧ್ಯಕ್ಷ ಬೂದನೂರು ಸ್ವಾಮಿ, ಬಿಜೆಪಿ ಮುಖಂಡ ಅಶೋಕ್ ಜಯರಾಮ್, ಮುಖಂಡರಾದ ಅಮರಾವತಿ ಚಂದ್ರಶೇಖರ್, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಸಿ.ಅಶ್ವತ್ಥ್ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!