Tuesday, November 24, 2026

ಪ್ರಾಯೋಗಿಕ ಆವೃತ್ತಿ

ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬ : ವಿಶೇಷಪೂಜೆ – ಸಿಹಿ ವಿತರಣೆ

ನಿಖಿಲ್ ಕುಮಾರಸ್ವಾಮಿ ಭವಿಷ್ಯದ ಯುವ ರಾಜಕಾರಣಿಯಾಗಿದ್ದು ರಾಜಕೀಯವಾಗಿ ಅವರಿಗೆ ಯಶಸ್ಸು ಸಿಗಲಿ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಹಾಗೂ ಮನ್ ಮುಲ್ ನಿರ್ದೇಶಕ ಬಿ.ಆರ್.ರಾಮಚಂದ್ರ ತಿಳಿಸಿದರು.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹುಟ್ಟು ಹಬ್ಬದ ಪ್ರಯುಕ್ತ ಮಂಡ್ಯ ನಗರದಲ್ಲಿರುವ ಶ್ರೀ ಲಕ್ಷ್ಮಿಜನಾರ್ದನ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಪೇಟೆ ಬೀದಿಯಲ್ಲಿ ಸಾರ್ವ ಜನಿಕರಿಗೆ ಮತ್ತು ವರ್ತಕರಿಗೆ ಸಿಹಿ ವಿತರಣಾ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.

ಮಂಡ್ಯ ಜೆಡಿಎಸ್ ನ ಭದ್ರಕೋಟೆ ಜೆಡಿಎಸ್ ಶಕ್ತಿಯುತವಾಗಿಯೇ ಇದೆ.ಆ ಶಕ್ತಿ ನಮ್ಮ ಕೇಂದ್ರ ಸಚಿವ ಕುಮಾರಸ್ವಾಮಿ ಅವರಲ್ಲಿದೆ.ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಘೋಷಣೆ ಕೂಗಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಿಸಿದರು. ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ನಿಖಿಲ್ ಹೆಸರಿನಲ್ಲಿ ಅರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಿದ ಜೆಡಿಎಸ್ ನಾಯಕರು ಶಕ್ತಿ ಪ್ರದರ್ಶನ ಮಾಡಿದರು.

ಪಕ್ಷದ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರಿಗೆ ಭಗವಂತ ಒಳ್ಳೆಯದನ್ನು ಮಾಡಲಿ.ಮುಂದಿನ ದಿನಗಳಲ್ಲಿ ಅವರ ಕನಸು, ಆಕಾಂಕ್ಷೆಗಳೆಲ್ಲವೂ ಈಡೇರಿ ನೊಂದವರಿಗೆ ನಿಸ್ವಾರ್ಥ ಮನಸ್ಸಿನಿಂದ ಸೇವೆ ಮಾಡುವ ಅವಕಾಶ ದೊರೆಯಲಿ ದೇವರು ಅವರಿಗೆ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಿ ರಾಜಕೀಯವಾಗಿ ಯಶಸ್ಸು ಸಿಗಲಿ ಎಂದು ಪ್ರಾರ್ಥಿಸಿ, ಹುಟ್ಟು ಹಬ್ಬದ ಶುಭ ಕೋರಿದರು.

ಪೂಜೆ ಬಳಿಕ ಪಟಾಕಿ ಸಿಡಿಸಿ,ಸಿಹಿ ಹಂಚಿ ಸಂಭ್ರಮಾಚರಣೆ ಬಳಿಕ ಲಕ್ಷ್ಮಿ ಜನಾರ್ಧನ ದೇವಸ್ಥಾನದಿಂದ ಹೊಳಲು ವೃತ್ತ,ಕಾಳಿಕಾಂಭ ದೇವಸ್ಥಾನದವರೆಗೆ ಮೆರವಣಿಗೆ ಮಾಡಿದರು

ಈ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾಧ್ಯಕ್ಚ ಡಿ.ರಮೇಶ್, ನಗರಸಭೆ ಮಾಜಿ ಅಧ್ಯಕ್ಷ ನಾಗೇಶ್, ಮನ್ ಮುಲ್ ನಿರ್ದೇಶಕ ರಘುನಂದನ್, ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ಪುಟ್ಟಸ್ವಾಮಿ, ಸೇರಿದಂತೆ ಹಲವರು ಭಾಗಿಯಾಗಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ