Thursday, October 24, 2024

ಪ್ರಾಯೋಗಿಕ ಆವೃತ್ತಿ

ಚನ್ನಪಟ್ಟಣ| ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿ

ಚನ್ನಪಟ್ಟಣ ಉಪಚುನಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ತೀವ್ರ ನಿಗೂಢತೆ ಕಾಪಾಡಿಕೊಂಡು ಬಂದಿದ್ದ ಜೆಡಿಎಸ್ ಪಕ್ಷದ ನಾಯಕರು (JDS) ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕೀಳಿಸುವುದಾಗಿ ಘೋಷಿಸಿದ್ದಾರೆ.

ಚನ್ನಪಟ್ಟಣ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಅಕ್ಟೋಬರ್ 25 ಕೊನೆಯ ದಿನವಾಗಿದೆ. ಆದ್ದರಿಂದ ಈಗ ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ್ ಎದುರಾಳಿಯಾಗಿ, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿಯನ್ನು ಕಣಕ್ಕೆ ಇಳಿಸಿದೆ.

ನಿಖಿಲ್ ಕುಮಾರಸ್ವಾಮಿ ಅಥವಾ ಸ್ಥಳೀಯ ಜೆಡಿಎಸ್ ಮುಖಂಡ ಜಯಮುತ್ತು ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬಂದಿದ್ದವು. ಮಂಗಳವಾರ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಆಯೋಜಿಸಲಾಗಿದ್ದ ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿಯೇ ಅಭ್ಯರ್ಥಿಯಾಗಲಿ ಎಂದು ಆಗ್ರಹ ಕೇಳಿ ಬಂದಿತ್ತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!