Saturday, May 18, 2024

ಪ್ರಾಯೋಗಿಕ ಆವೃತ್ತಿ

ನಿಖಿಲ್ ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಬರಲಿ : ರವೀಂದ್ರ ಶ್ರೀಕಂಠಯ್ಯ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉತ್ಸಾಹಿ ಯುವಕ, ಜನರ ಮಧ್ಯೆ ನಿಂತು ಬೆರೆಯುವ ಗುಣವಿರುವ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲು ಜಾ.ದಳ ವರಿಷ್ಠರು ಅವಕಾಶ ನೀಡಲಿ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ತಿಳಿಸಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಬಸ್ತೀಪುರ ಗ್ರಾಮದಲ್ಲಿ 16 ಲಕ್ಷ ರೂ.ವೆಚ್ಚದ ಸರ್ಕಾರಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ಚಾಲನೆ ನೀಡಿ ಅವರು ಮಾತನಾಡಿದರು.

2023ರ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೂ ವರಿಷ್ಠರು ಅವಕಾಶ ನೀಡಬೇಕು. ನಿಖಿಲ್ ಬಹಳ ಉತ್ಸಾಹಿ ಯುವಕನಾಗಿದ್ದು, ನಮ್ಮ ನಾಯಕ ಕುಮಾರಸ್ವಾಮಿ ಅವರಂತೆ ಬಡವರು ಮತ್ತು ರೈತರ ಪರವಾಗಿ ದೂರದೃಷ್ಟಿಯ ಯೋಜನೆ ಹೊಂದಿದ್ದಾರೆ. ಅಲ್ಲದೆ ಕುಮಾರಸ್ವಾಮಿ ಅವರನ್ನು ಮೀರಿ ಜನರ ಮಧ್ಯೆ ಬೆರೆಯುವ,ಅವರಿಗೆ ಸ್ಪಂದಿಸುವ ಗುಣ ಹೊಂದಿರುವ ನಿಖಿಲ್ ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಆಗಬೇಕು.ಅದಕ್ಕಾಗಿ ಒಂದು ಕ್ಷೇತ್ರ ಗುರುತಿಸಿಕೊಂಡು ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕೆಂದು ಕೇಳಿಕೊಂಡಿದ್ದೇವೆ ಎಂದರು. ನಿಖಿಲ್ ಕುಮಾರಸ್ವಾಮಿ ಮಂಡ್ಯ ಜಿಲ್ಲೆಗೆ ಬರುವ ಬಗ್ಗೆ ಎಂದಿಗೂ, ಎಲ್ಲೂ ವಿಚಾರ ಪ್ರಸ್ತಾಪ ಆಗಿಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

90 % ಫೈನಲ್

ಮೈಸೂರಿನಲ್ಲಿ ನಡೆದ ಜೆಡಿಎಸ್ ಪಕ್ಷದ ಸಮಾವೇಶದಲ್ಲಿ ಈಗಾಗಲೇ ಶೇ. 90ರಷ್ಟು ಅಭ್ಯರ್ಥಿಗಳ ಟಿಕೆಟ್ ಪಟ್ಟಿ ಫೈನಲ್ ಆಗಿದೆ. ಇನ್ನು 10% ಗೊಂದಲವಿದೆ. ಸಣ್ಣ ಪುಟ್ಟ ಗೊಂದಲಗಳನ್ನು ಅತಿ ಬೇಗ ಬಗೆಹರಿಸಿಕೊಂಡು ಆ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪಕ್ಷ ಘೋಷಣೆ ಮಾಡಲಿದೆ ಎಂದರು.

ಎಲ್ಲಾ ರಸ್ತೆ ಹದಗೆಟ್ಟಿವೆ

ಇತ್ತೀಚೆಗೆ ಬಿದ್ದ ಮಳೆಯ ಕಾರಣದಿಂದ ಶ್ರೀರಂಗಪಟ್ಟಣದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಮತ್ತು ರಾಜ್ಯದಲ್ಲಿ ರಸ್ತೆ ಹಾಳಾಗಿದೆ. ರಾಜ್ಯ ಸರ್ಕಾರ ಬೆಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ರಸ್ತೆಗಳ ಸರಿಪಡಿಸಲು ಸರ್ಕಾರ ಮೊದಲು ಆದ್ಯತೆ ನೀಡಬೇಕು. ಈಗಾಗಲೇ ಪಾಲಹಳ್ಳಿ-ಕೆಆರ್ ಎಸ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಪೂಜೆ ಮಾಡಲಾಗಿದೆ.ಈ ರಸ್ತೆಗಳ ಅಭಿವೃದ್ಧಿ ಬಗ್ಗೆಯೂ ಗಮನ ಹರಿಸಲಾಗುವುದು ಎಂದರು.
ನಂತರ ಗ್ರಾಮದಲ್ಲಿ ವಿವಿಧ ಸಂಘಟನೆಗಳು ಮತ್ತು ವಿದ್ಯಾರ್ಥಿ ಒಕ್ಕೂಟ ಖ್ಯಾತ ಚಿತ್ರನಟ ದಿ॥ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ಏರ್ಪಡಿಸಿದ್ದ’ ಅಪ್ಪು ಕಪ್’ ಕ್ರಿಕೆಟ್ ಪಂದ್ಯಾವಳಿಯನ್ನು ಶಾಸಕ ರವೀಂದ್ರ ಶ್ರೀಕಂಠಯ್ಯ ಉದ್ಘಾಟಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!