ಮಂಡ್ಯ ನಗರದ ಸರ್. ಎಂ ವಿಶ್ವೇಶ್ವರಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಬೇಸಿಗೆ ಶಿಬಿರವನ್ನು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೇಸಿಗೆ ಶಿಬಿರದಲ್ಲಿ ಮಕ್ಕಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣ ಮಾಡಬೇಕು. ಬೇಸಿಗೆ ಶಿಬಿರದಿಂದ ಹಲವಾರು ವಿಷಯಗಳು ಮಕ್ಕಳಿಗೆ ತಿಳಿಯಲಿದೆ.ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿರುವ ಭಾರತದ ವೀರಯೋಧರಿಗೆ ಕ್ಯಾಂಡಲ್ ಹಚ್ಚಿ ನಮನ ಸಲ್ಲಿಸಲಾಯಿತು. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಎಸ್ ಪುಟ್ಟರಾಜು, ರಾಜ್ಯ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಡಾ.ಕೆ ಅನ್ನದಾನಿ, ಮಂಡ್ಯ ಜಿಲ್ಲಾಧ್ಯಕ್ಷ ಡಿ. ರಮೇಶ್,ಮನ್ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಸೇರಿದಂತೆ ಅನೇಕ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




