Friday, September 20, 2024

ಪ್ರಾಯೋಗಿಕ ಆವೃತ್ತಿ

ಫೆ.19-20 ಕ್ಕೆ ಜ್ಞಾನ-ವಿಜ್ಞಾನ ಮತ್ತು ತಂತ್ರಜ್ಞಾನ ಮೇಳ : ನಿರ್ಮಲಾನಂದನಾಥ ಸ್ವಾಮೀಜಿ ಅವರ ವಾರ್ಷಿಕ ಪಟ್ಟಾಭಿಷೇಕ

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರ ವಾರ್ಷಿಕ ಪಟ್ಟಾಭಿಷೇಕದ ಅಂಗವಾಗಿ ಫೆ.19 ಮತ್ತು ಫೆ.20 ಕ್ಕೆ ಜ್ಞಾನ,ವಿಜ್ಞಾನ ಮತ್ತು ತಂತ್ರಜ್ಞಾನ ಮೇಳವನ್ನು ಆಯೋಜಿಸಲಾಗುತ್ತಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಸಿಇಒ ಡಾ.ಎನ್.ಎಸ್.ರಾಮೇಗೌಡ ಹೇಳಿದರು.

ಪಟ್ಟಣದ ಶ್ರೀ ಆದಿಚುಂಚನಗಿರಿ ಕಲಾ,ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸೋಮವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿ‌ಯಲ್ಲಿ ಮಾತನಾಡಿದ ಅವರು ನಿರ್ಮಲಾನಂದನಾಥ ಸ್ವಾಮೀಜಿ ಅವರ 10 ನೇ ವರ್ಷದ ಪಟ್ಟಾಭಿಷೇಕದ ಅಂಗವಾಗಿ ಜ್ಞಾನ,ವಿಜ್ಞಾನ ಮತ್ತು ತಂತ್ರಜ್ಞಾನ ಮೇಳವನ್ನು ಆಯೋಜಿಸಿದ್ದು, ಫೆ.19 ರ ಭಾನುವಾರ ವಸ್ತು ಪ್ರದರ್ಶನ ಮತ್ತು ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿದ್ದು, ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನ್ನೀಧ್ಯದಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ ಅಧ್ಯಕ್ಷ ಪ್ರೊ.ಡಾ.ಟಿ.ಜಿ.ಸೀತಾರಾಮ ಉದ್ಘಾಟನೆ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಡಾ.ಶಿವಾನಂದ ಶಿವಾಚಾರ್ಯರು, ಕಂದಾಯ ಸಚಿವ ಆರ್.ಅಶೋಕ್, ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಭಾಗವಹಿಸಲಿದ್ದಾರೆ. ಮೇಳದಲ್ಲಿ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಶಿಕ್ಷಣ ಸಂಸ್ಥೆಗಳು ಸೇರಿದಂತೆ ರಾಜ್ಯ ವಿವಿಧ ಪ್ರತಿಷ್ಠಿತ ಕಾಲೇಜುಗಳು ವಸ್ತು ಪ್ರದರ್ಶನದಲ್ಲಿ ಭಾಗವಹಿಸಲಿವೆ ಎಂದರು.

ಅಲ್ಲದೇ ಮಧ್ಯಾಹ್ನದ ನಂತರ ಬಿ.ಗೋವಿಂದ ರಮೇಶ್ ಅವರಿಂದ ಸಹಕಾರಿ ಕಲಿಕೆ ಕಾರ್ಯಕ್ರಮಗಳು, ಡಾ.ವಿಜಯಲಕ್ಷ್ಮೀ ಐ.ಬಾಳೇಕುಂದ್ರಿ ಅವರಿಂದ ಮಕ್ಕಳಲ್ಲಿ ಹೃದಯ ರಕ್ತನಾಳದ ಆರೋಗ್ಯವನ್ನು ನಿರ್ಧರಿಸುವ ಅಂಶಗಳು, ಅಕ್ಷಯಾ ಗೋಖಲೆ ಅವರಿಂದ ಭಾರತೀಯತೆ ಮತ್ತು ವಿಜ್ಞಾನ ಎಂಬ ವಿಷಯಗಳ ಕುರಿತು ಪ್ರತ್ಯೇಕ ಉಪನ್ಯಾಸ ಕಾರ್ಯಕ್ರಮಗಳು ಜರುಗಲಿವೆ. ಜೊತೆಗೆ ಫೆ.20 ರ ಸೋಮವಾರ ಸ್ವಾಮೀಜಿ ಅವರಿಗೆ ವಾರ್ಷಿಕ ಪಟ್ಟಾಭಿಷೇಕ ಜರುಗಲಿದ್ದು, ಕೇಂದ್ರ ರಾಜ್ಯ ಸಚಿವ ಭಗವಂತ ಖೂಬಾ, ಶಾಸಕರಾದ ಸುರೇಶ್ ಗೌಡ, ಸಿ.ಎಸ್.ಪುಟ್ಟರಾಜು, ಮಸಾಲ ಜಯರಾಮ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜೊತೆಗೆ 2023 ನೇ ಸಾಲಿನ ವಿಜ್ಞಾತಂ ಪ್ರಶಸ್ತಿಯನ್ನು ಡಾ.ಸುಧಾಮೂರ್ತಿ ಅವರಿಗೆ ನೀಡಿ ಗೌರವಿಸಲಾಗುತ್ತದೆ. ಜೊತೆಗೆ ಎರಡು ದಿನಗಳು ಸಹ ಸುಗಮ ಸಂಗೀತ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ರವೀಂದ್ರ, ಕಾಲೇಜು ಆಡಳಿತ ಮಂಡಳಿಯ ಸದಸ್ಯ ಹೆಚ್.ಟಿ.ಕೃಷ್ಣೇಗೌಡ, ರಿಜಿಸ್ಟ್ರಾರ್ ಚಂದ್ರೇಗೌಡ ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!