Tuesday, November 24, 2026

ಪ್ರಾಯೋಗಿಕ ಆವೃತ್ತಿ

ಸಾಮಾಜಿಕ ಸಮಸ್ಯೆ ಬಗೆಹರಿಸಲು ಸನ್ಯಾನ ಧೀಕ್ಷೆ ಸ್ವೀಕಾರ ಶ್ಲಾಘನೀಯ : ಡಾ.ಜಯರಾಂ ರಾಯಪುರ 

ಸಾಮಾಜಿಕ ಸಮಸ್ಯೆಗಳನ್ನು ಗುರಿತಿಸಿ, ಅದಕ್ಕೆ ಪರಿಹಾರ ಒದಗಿಸುವ ಕೆಲಸ ಮಾಡಿದರೆ ಸನ್ಯಾಸತ್ವ ಸಾರ್ಥಕವಾಗುತ್ತದೆ, ಆ ನಿಟ್ಟಿನಲ್ಲಿ ಸನ್ಯಾಸತ್ವ ಸ್ವೀಕಾರ ಮಾಡಿರುವ ನಿಶ್ಚಲಾನಂದನಾಥ ಸ್ವಾಮೀಜಿಯವರ ನಡೆ ಶ್ಲಾಘನೀಯ ಎಂದು ಆದಾಯ ತೆರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಯರಾಮ್ ರಾಯಪುರ ಅಭಿಪ್ರಾಯಪಟ್ಟರು.

ನಾಗರಿಕ ಸಮಿತಿ ಮಂಡ್ಯ ಇವರ ವತಿಯಿಂದ ಮಂಡ್ಯ ನಗರದ ಕಲಾಮಂದಿರದಲ್ಲಿ ವಿಶ್ವ ಒಕ್ಕಲಿಗರ ಮಠ ಕೆಂಗೇರಿ ಉತ್ತರಾಧಿಕಾರಿ ಪೀಠಾಧ್ಯಕ್ಷ ಡಾ.ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಅವರ ಗೌರವ ಸಮರ್ಪಣ ಸಮಾರಂಭದಲ್ಲಿ ಅಭಿನಂದನಾ ನುಡಿಗಳನ್ನು ನುಡಿದರು.

ಸಮಾಜದಲ್ಲಿ ಸಾಮಾಜಿಕ ಸಮಸ್ಯೆಗಳು ಬೆಟ್ಟದಷ್ಟಿವೆ, ಅವುಗಳಿಗೆ ಪರಿಹಾರ ನೀಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಾಕಷ್ಟು ಸ್ವಾಮೀಜಿಗಳು ಕೆಲಸ ಮಾಡುತ್ತಿದ್ದಾರೆ. ಸ್ವಾಮೀಜಿ ಆಗುವುದು ಸುಲಭದ ಕೆಲಸವಲ್ಲ, ತನ್ನ ಸರ್ವಸ್ವವನ್ನು ತ್ಯಾಗ ಮಾಡಬೇಕಾಗುತ್ತದೆ. ಸಮಾಜಕ್ಕೆ ಮಾರ್ಗದರ್ಶನ ಮಾಡುವುದಕ್ಕಾಗಿ ಸನ್ಯಾಸತ್ವ ಸ್ವೀಕರಸುವವರು ವಿರಳ. ಇದಕ್ಕೆ ಮಾತೃ ಹೃದಯ ಬೇಕಾಗಿದೆ, ಸಮಾಜಮುಖಿ ಗುಣ ಬೇಕಾಗಿದೆ. ಈ ಎಲ್ಲ ಗುಣಗಳನ್ನು ನಿಶ್ಚಲಾನಂದನಾಥ ಸ್ವಾಮೀಜಿಯವರು ಹೊಂದಿದ್ದಾರೆ ಎಂದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಎಲ್ಲರೂ ಇಷ್ಟಪಡುವ ಅಪರೂಪದ ವ್ಯಕ್ತಿ ನಿಶ್ಚಲಾನಂದರದ್ದಾಗಿದೆ, ಎಲ್ಲರೊಳಗೊಂದಾಗುವುದು ಅವರ ವ್ಯಕ್ತಿತ್ವವಾಗಿದೆ. ವ್ಯಕ್ತಿ ಮತ್ತು ವ್ಯಕ್ತಿತ್ವವನ್ನು ಗಮನಿಸಿದಾಗಿ, ನಿಶ್ಚಲಾನಂದರ ವ್ಯಕ್ತಿತ್ವ ಹೆಚ್ಚು ತೂಕದ್ದಾಗಿದೆ. ಅವರ ಹೃದಯವಂತಿಕೆ, ಮಾತೃಹೃದಯ, ಸರಳತೆ, ಸಮಾಜದ ಮೇಲಿನ ಪ್ರೀತಿ ಎಲ್ಲರಿಗೂ ಮಾದರಿಯಾಗಿದ್ದಾರೆ. ನಾಗರಾಜು ಅವರು ಯಾವ ಕ್ಷೇತ್ರಕ್ಕೆ ಹೋದರೂ ಯಶಸ್ಸನ್ನು ಕಾಣುತ್ತಾರೆ. ಅಂತಹ ವ್ಯಕ್ತಿಗೆ ಇಂದು ಅಭಿನಂದನೆ ಮಾಡುತ್ತಿರುವುದು ಶ್ಲಾಘನೀಯ. ಅವರು ಸಮಾಜಕ್ಕೆ ಆಸ್ತಿಯಾಗಿದ್ದಾರೆ ಎಂದರು.

ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷರಾದ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮಿಗಳ ದಿವ್ಯ ಸಾನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಶ್ರೀ ಪುರುಷೋತ್ತಮಾಥ ಸ್ವಾಮೀಜಿ, ಮಾಜಿ ಶಾಸಕರಾದ ಕೆ ಟಿ ಶ್ರೀಕಂಠೇಗೌಡ, ಉದ್ಯಮಿ ವೆಂಕಟರಮಣೇಗೌಡ  ಜಿ.ಪಂ.ಸಿ.ಇ.ಒ ಕೆ ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪ ವಿಭಾಗಾಧಿಕಾರಿಗಳಾದ ಶಿವಮೂರ್ತಿ, ಕೆ ಆರ್ ಶ್ರೀನಿವಾಸ್, ಅಪರ ಜಿಲ್ಲಾಧಿಕಾರಿ ಬಿಸಿ ಶಿವಾನಂದಮೂರ್ತಿ, ಬೆಂಗಳೂರಿನ ಬಿಜಿಎಸ್ ಡೆಂಟಲ್ ಕಾಲೇಜಿನ ಡಾ.ಎಚ್.ಆದರ್ಶ್, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ. ಜಯಪ್ರಕಾಶ್ ಗೌಡ, ಮಂಡ್ಯ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ ನಾಗೇಶ್ ಅವರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ