Tuesday, November 24, 2026

ಪ್ರಾಯೋಗಿಕ ಆವೃತ್ತಿ

ನಿವೇಶನ ಹಾಗೂ ವಸತಿ ರಹಿತ ಫಲಾನುಭವಿಗಳ ಆಯ್ಕೆ ಮಾಡಲು ಸೂಚನೆ

ಗ್ರಾಮಸಭೆ ನಡೆಸಿ ನಿವೇಶನ ಹಾಗೂ ವಸತಿ ರಹಿತ ಫಲಾನುಭವಿಗಳ ಆಯ್ಕೆಮಾಡಿ ಸೆಪ್ಟೆಂಬರ್ 10 ರೊಳಗೆ ನಿಗದಿ ಪಡಿಸಿರುವ ಗುರಿ ಸಾಧಿಸುವಂತೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ರೇಷ್ಮೆ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ.ಕೆ.ಸಿ.ನಾರಾಯಣ ಗೌಡ ಸೂಚಿಸಿದರು.

ಕೆ.ಆರ್.ಪೇಟೆ ತಾಲ್ಲೂಕಿನ ಚಿಕ್ಕೋನಹಳ್ಳಿಯ ರೇಷ್ಮೆ ತರಬೇತಿ ಕೇಂದ್ರದಲ್ಲಿ ಮಳೆಹಾನಿ ಪರಿಹಾರ ಕ್ರಮ ಹಾಗೂ ಇನ್ನಿತರ ವಿಷಯಗಳ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಭಾರೀ ಮಳೆಯಿಂದ ಕೆ.ಆರ್.ಪೇಟೆಯಲ್ಲಿ‌ ಹಾನಿಯಾಗಿರುವ‌ ಸಂತೇಬಾಚಳ್ಳಿ ರಸ್ತೆ ಕುಸಿತ, ಕಿಕ್ಕೇರಿಯ ಸಂಪರ್ಕ ರಸ್ತೆ,ಅಘಲಯದ ಸೇತುವೆ ಹಾನಿಯಾಗಿರುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು. ತಾತ್ಕಲಿಕವಾಗಿ ರಸ್ತೆ ವ್ಯವಸ್ಥೆ ಹಾಗೂ ಪುನರ್ ನಿರ್ಮಾಣಕ್ಕಾಗಿ ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯ ಬಗ್ಗೆ ಮಾಹಿತಿ ಪಡೆದುಕೊಂಡು ಸಲಹೆ ನೀಡಿದರು.

ಕೆ.ಆರ್.ಪೇಟೆ ತಾಲ್ಲೂಕಿಗೆ ಸಂಬಂಧಿಸಿದ ಲೋಕೋಪಯೋಗಿ, ಸಣ್ಣನೀರಾವರಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗಳು ಕೈಗೊಂಡಿರುವ ರಸ್ತೆ, ಕೆರೆ ಹಾಗೂ ಇನ್ನಿತರ ಅಭಿವೃದ್ದಿ ಕಾಮಗಾರಿಗಳಿಗೆ ಮಂಜೂರಾಗಿರುವ ಅನುದಾನ ಹಾಗೂ ಕಾಮಗಾರಿಗಳ ಸ್ಥಿತಿಗತಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ತಿಳಿಸಿದರು.

ಬೆಳೆಹಾನಿ ಸಂಬಂಧ ಪರಿಹಾರ ಒದಗಿಸಲು ವಿವರವನ್ನು ಪರಿಹಾರ ಪೋರ್ಟಲ್ ನಲ್ಲಿ ಭರ್ತಿಮಾಡಬೇಕಿದ್ದು, ಆಗಸ್ಟ್ 27 ರೊಳಗಾಗಿ ವಿವರವನ್ನು ಭರ್ತಿಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು.

ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಸಚಿವರ ಆಪ್ತ ಕಾರ್ಯದರ್ಶಿಗಳಾದ ಹೆಚ್.ಜಿ ಪ್ರಭಾಕರ್,ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ, ಜಿ.ಪಂ. ಉಪಕಾರ್ಯದರ್ಶಿ ಸರಸ್ವತಿ, ತಹಶೀಲ್ದಾರ್ ಎಂ.ವಿ.ರೂಪ, ಮುಡಾ ಅಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ