Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿಲ್ಲ: ವೈದ್ಯಕೀಯ ವರದಿ

ಕಳೆದ ಮೂರು ದಿನಗಳಿಂದ ತೀವ್ರ ಸಂಚಲನ ಮೂಡಿಸಿದ್ದ ಎಂಟು ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಬಾಲಕಿ ಮೇಲೆ ಅತ್ಯಾಚಾರವೇ ನಡೆದಿಲ್ಲವೆಂದು ವೈದ್ಯಕೀಯ ವರದಿ ದೃಢಪಡಿಸಿದೆ.

ಮಂಡ್ಯ ನಗರದ ಸರ್ಕಾರಿ ಶಾಲೆಯ ಆವರಣವೊಂದರಲ್ಲಿ ಬಾಲಕಿಯ ಮೇಲೆ ಜ.31ರಂದು ಸಾಮೂಹಿಕ ಅತ್ಯಾಚಾರ ನಡೆದಿತ್ತು ಎಂದು ಪೋಷಕರು ಫೆ.1 ರಂದು ದೂರು ನೀಡಿದ್ದರು.

ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಹಲವು ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಈ ಪ್ರಕರಣ ಸದ್ದು ಮಾಡಿತ್ತು. ಬಿಜೆಪಿ ರಾಜ್ಯ ನಾಯಕರು ಕೂಡ ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿ ಕಾಂಗ್ರೆಸ್ ಆಡಳಿತದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಥಳೀಯ ಬಿಜೆಪಿ ಕಾರ್ಯಕರ್ತರು ಕೂಡ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಪ್ರಕರಣವನ್ನು ಮುಚ್ಚಿ ಹಾಕುತ್ತಿದ್ದಾರೆ ಎಂದು ಆರೋಪಿಸಿ, ಆರೋಪಿಗಳ ಪತ್ತೆ ಮಾಡುವಂತೆ ಎಸ್ಪಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡ ಗಂಭೀರವಾಗಿ ಪ್ರಕರಣದ ವಿಚಾರಣೆ ನಡೆಸುವಂತೆ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಪೋಲಿಸ್ ಇಲಾಖೆಯ ಹಲವು ಅಧಿಕಾರಿಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು. ಆ ಪ್ರಕಾರ ಬಾಲಕಿ ಮತ್ತು ಆಕೆಯ ಪೋಷಕರು ಘಟನೆ ಕುರಿತಂತೆ ಭಿನ್ನ ಹೇಳಿಕೆಗಳನ್ನು ನೀಡಿದ್ದರು. ಇದರಿಂದ ಈ ಪ್ರಕರಣ ಪೊಲೀಸರಲ್ಲಿ ಗೊಂದಲ ಮೂಡಿಸಿತ್ತು.

ಆರಂಭದಲ್ಲಿ ಬಾಲಕಿಯ ಪೋಷಕರು ಅತ್ಯಾಚಾರ ನಡೆದಿರುವುದಾಗಿ ಹೇಳಿದ್ದರು. ಆದರೆ, ಬಾಲಕಿಯಿಂದ ಪೊಲೀಸರು ಹೇಳಿಕೆ ಪಡೆದಾಗ ಆಕೆ ಹೊಟ್ಟೆಯ ಭಾಗಕ್ಕೆ ಮೂವರು ಹಲ್ಲೆ ನಡೆಸಿದ್ದಾಗಿ, ಈ ವಿಷಯವನ್ನು ಯಾರಿಗೂ ಹೇಳದಂತೆ ಹೆದರಿಸಿದ್ದಾಗಿ ಮಾಹಿತಿ ನೀಡಿದ್ದಳು. ಈ ಬಗ್ಗೆ ಶಾಲೆಯ ಶಿಕ್ಷಕರನ್ನು ಪೋಲಿಸರು ವಿಚಾರಣೆ ನಡೆಸಿದ್ದರು. ಆಗ ಅಂತಹ ಘಟನೆ ಶಾಲಾ ಆವರಣದಲ್ಲಿ ಇಂತಹ ಘಟನೆ ನಡೆದಿಲ್ಲ ಎಂದು ಹೇಳಿಕೆ ನೀಡಿದ್ದರು. ಅಲ್ಲದೆ ಬಾಲಕಿ ಕೂಡ ಹಲವು ಬಾರಿ ವ್ಯತಿರಿಕ್ತ ಹೇಳಿಕೆಗಳನ್ನು ನೀಡಿದ್ದಳು.

ಈ ಹಿನ್ನೆಲೆಯಲ್ಲಿ ಪೋಲಿಸರು ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಬಾಲಕಿಯ ಬಟ್ಟೆಗಳನ್ನು ಎಫ್ಎಸ್ಎಲ್ ಗೆ ಕಳುಹಿಸಿದ್ದಾರೆ. ಮಿಮ್ಸ್ ಆಸ್ಪತ್ರೆ ವೈದ್ಯರು ಬಾಲಕಿಯನ್ನು ಪರೀಕ್ಷಿಸಿದ ಸಂದರ್ಭದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ವರದಿ ನೀಡಿದ್ದಾರೆ. ಇದರಿಂದ ಪೋಲಿಸ್ ಅಧಿಕಾರಿಗಳು ಕೂಡ ಎಫ್ಎಸ್ಎಲ್ ಗೆ ಬಾಲಕಿಯ ಬಟ್ಟೆಗಳನ್ನು ಕಳುಹಿಸಿದ್ದು, ಅಲ್ಲಿಂದ ಬರುವ ವರದಿಗೆ ಕಾಯುತ್ತಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ