Friday, November 20, 2026

ಪ್ರಾಯೋಗಿಕ ಆವೃತ್ತಿ

ಅಲೆಮಾರಿ ಜನಾಂಗ ಸರ್ಕಾರದ ಸೌಲಭ್ಯ ಪಡೆಯಬೇಕು : ಪಲ್ಲವಿ

ಸರ್ಕಾರವು ಅಲೆಮಾರಿ ಜನಾಂಗಗಳನ್ನು ಮುಖ್ಯವಾಹಿನಿಗೆ ಕರೆತರಲು ಅನೇಕ ಸೌಲಭ್ಯಗಳನ್ನು ಜಾರಿಗೊಳಿಸಿದೆ. ಕನಿಷ್ಠ ದಾಖಲೆಗಳಾದ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಮತ್ತು ಪಡಿತರ ಚೀಟಿಗಳನ್ನು ಇಲಾಖೆಗೆ ಸಲ್ಲಿಸಿ ಸೌಲಭ್ಯಗಳನ್ನು ಪಡೆಯಿರಿ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪಲ್ಲವಿ.ಜಿ ತಿಳಿಸಿದರು.

ಮಂಡ್ಯ ಜಿಲ್ಲೆಯ ಕೆ. ಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಕೃಷ್ಣಪುರ ಗ್ರಾಮದಲ್ಲಿನ ಪರಿಶಿಷ್ಟ ಜಾತಿಯ ಸಿಂಧೊಳ್ಳು ಜನಾಂಗ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ನಡೆಸಿದರು ಮತ್ತು ಜನಾಂಗದ ಹಕ್ಕು ಪತ್ರ ಸಮಸ್ಯೆ ಹಾಗೂ ಕುಂದು ಕೊರತೆಗಳನ್ನು ಆಲಿಸಲಿದರು.

ಅಲೆಮಾರಿ ಜನಾಂಗ ಸಾಮಾಜಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿಯಾಗಬೇಕು ಎಂಬ ಉದ್ದೇಶದಿಂದ ಮುಖ್ಯ ಮಂತ್ರಿಯವರು 2016 ರಲ್ಲಿ ಜಾರಿಗೆ ತಂದ ಅಭಿವೃದ್ಧಿ ಕೋಶ 2022 ರಲ್ಲಿ ನಿಗಮವಾಗಿ ಪರಿವರ್ತನೆಗೊಂಡಿದೆ ಇದರ ಮೂಲ ಉದ್ದೇಶವೇ ಸರ್ಕಾರದ ಸೌಲಭ್ಯಗಳನ್ನು ಜನಾಂಗದವರಿಗೆ ತಲುಪಿಸುವುದು ಎಂದರು.

ಶಿಕ್ಷಣ ಅಭಿವೃದ್ಧಿಯ ಮುಖ್ಯ ಅಸ್ತ್ರ, ಉಚಿತ ಶಿಕ್ಷಣ, ಬಿಸಿ ಊಟ ಸೇರಿದಂತೆ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಪ್ರತಿಯೊಬ್ಬರು ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಿ ಎಂದು ಪೋಷಕರಿಗೆ ತಿಳುವಳಿಕೆ ಹೇಳಿದರು.

20 ದಿನದೊಳಗಾಗಿ ಕೃಷ್ಣಪುರದಲ್ಲಿ ವಸತಿ ಇಲ್ಲದವರ ಅಂಕಿ-ಅಂಶ ಸಂಗ್ರಹಿಸವೇಕು. ಅಗತ್ಯ ದಾಖಲಾತಿಗಳನ್ನು ಪಡೆದುಕೊಂಡು ಜಾತಿ ಪ್ರಮಾಣ ಹೊಂದಿಲ್ಲದವರಿಗೆ ಜಾತಿ ಪ್ರಮಾಣ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ತಾಂತ್ರಿಕ ತೊಂದರೆಗಳನ್ನು ಸರಿಪಡಿಸಿ ಸಾರ್ವಜನಿಕ ಸ್ಮಶಾನ, ಮೂಲ ಸೌಲಭ್ಯಗಳಾದ ಒಳ ಚರಂಡಿ ವ್ಯವಸ್ಥೆ, ರಸ್ತೆ ಸೌಲಭ್ಯ, ನೀರಿನ ಸೌಲಭ್ಯ ಮತ್ತು ವಿದ್ಯುತ್ ಸೌಲಭ್ಯದ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ವಸತಿ ಶಿಕ್ಷಣ ಸಂಸ್ಥೆ ಸೌಲಭ್ಯ ಹಾಗೂ ಬಾಲ್ಯ ವಿವಾಹ ಬಗ್ಗೆ ಕುರಿತು ಜನತಾ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗಾಗಿ ಸರ್ಕಾರವು ಒದಗಿಸುತ್ತಿರುವ ಸೌಲಭ್ಯಗಳ ಬಗ್ಗೆ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಜನಾಂಗದವರಿಗೆ ಮಾಹಿತಿ ನೀಡಬೇಕು ಇದು ನಿಮ್ಮ ಆದ್ಯ ಕರ್ತವ್ಯ ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ಕೆ. ಆರ್.ಪೇಟೆ ತಹಸೀಲ್ದಾರ್ ಅಶೋಕ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸಿದ್ದಲಿಂಗೇಶ್, ಇನ್ಸ್ಪೆಕ್ಟರ್ ಸುಮಾರಾಣಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ರೈತ ಸಂಘದ ಅಧ್ಯಕ್ಷರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ