Friday, September 20, 2024

ಪ್ರಾಯೋಗಿಕ ಆವೃತ್ತಿ

ವಿಧಾನಸಭಾ ಚುನಾವಣೆ | ಮಂಡ್ಯದ 7 ಕ್ಷೇತ್ರಗಳಲ್ಲಿ 119 ಅಭ್ಯರ್ಥಿಗಳಿಂದ 181 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಮಂಡ್ಯ ಜಿಲ್ಲಾ ವ್ಯಾಪ್ತಿಯ 07 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿ ಏ.20ರ ಸಂಜೆ 4.30ರ ವೇಳೆಗೆ 119 ಅಭ್ಯರ್ಥಿಗಳಿಂದ 181 ನಾಮಪತ್ರ ಸಲ್ಲಿಕೆಯಾಗಿವೆ.

ನಾಮಪತ್ರ ಸಲ್ಲಿಕೆ ಪ್ರಾರಂಭವಾದ ಏ.13ರಿಂದ ಏ.20ರವರೆಗೆ ಮಳವಳ್ಳಿ ವಿಧಾನ ಸಭಾ ಕ್ಷೇತ್ರದಿಂದ ಒಟ್ಟು 20 ಅಭ್ಯರ್ಥಿಗಳಿಂದ 29 ನಾಮಪತ್ರ, ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಒಟ್ಟು 15 ಅಭ್ಯರ್ಥಿಗಳಿಂದ 22 ನಾಮಪತ್ರ, ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಒಟ್ಟು 14 ಅಭ್ಯರ್ಥಿಗಳಿಂದ 19 ನಾಮಪತ್ರಗಳು ಸಲ್ಲಿಕೆಯಾಗಿವೆ.

ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಒಟ್ಟು 23 ಅಭ್ಯರ್ಥಿಗಳಿಂದ 37 ನಾಮಪತ್ರ, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಒಟ್ಟು 21 ಅಭ್ಯರ್ಥಿಗಳಿಂದ 34 ನಾಮಪತ್ರ, ನಾಗಮಂಗಲ-191 ವಿಧಾನಸಭಾ ಕ್ಷೇತ್ರದಿಂದ ಒಟ್ಟು 17 ಅಭ್ಯರ್ಥಿಗಳಿಂದ 26 ನಾಮಪತ್ರ  ಹಾಗೂ ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದಿಂದ ಒಟ್ಟು 09 ಅಭ್ಯರ್ಥಿಗಳಿಂದ 14 ನಾಮಪತ್ರ ಸಲ್ಲಿಕೆಯಾಗಿವೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!