Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸೇವೆ ಮುಂದುವರಿಸಲು ಆಗ್ರಹಿಸಿ ಅಧ್ಯಾಪಕೇತರ ಸಿಬ್ಬಂದಿ ಪ್ರತಿಭಟನೆ

ಮಂಡ್ಯ ತಾಲೂಕಿನ ತೂಬಿನಕೆರೆಯ ಸರ್ ಎಂ ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಾತ್ಕಾಲಿಕ ಅಧ್ಯಾಪಕೇತರ ಸಿಬ್ಬಂದಿಯನ್ನು ಏಕಾಏಕಿ ಕೇಂದ್ರದಿಂದ ಹೊರ ಹಾಕಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ಅಧ್ಯಾಪಕೇತರ ಸಿಬ್ಬಂದಿಗಳು ಸೋಮವಾರ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.

ಮಂಡ್ಯನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ  ಕೇಂದ್ರದಲ್ಲಿ ತಾತ್ಕಾಲಿಕ ಅಧ್ಯಾಪಕೇತರರ ಸೇವೆಯನ್ನು ಮುಂದುವರೆಸುವಂತೆ ಒತ್ತಾಯಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿದ್ದ ಸರ್ ಎಂ ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರದಲ್ಲಿ ಕಳೆದ 16 ವರ್ಷದಿಂದ 32 ಮಂದಿ ಸಿಬ್ಬಂದಿ ಸಂಚಿತ ವೇತನದ ಆಧಾರದಲ್ಲಿ ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದೆವು. ಆದರೆ 2023-24ನೇ ಸಾಲಿನಿಂದ ಸ್ನಾತಕೋತ್ತರ ಕೇಂದ್ರ ಮಂಡ್ಯ ವಿಶ್ವವಿದ್ಯಾನಿಲಯಕ್ಕೆ ಒಳಪಟ್ಟಿದ್ದು, ಮೈಸೂರು ವಿಶ್ವವಿದ್ಯಾನಿಲಯ ತಾತ್ಕಾಲಿಕ ಅಧ್ಯಾಪ ಕೇತರ ಸಿಬ್ಬಂದಿಯ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿ ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಮುಂದುವರೆಸುವಂತೆ ಕೋರಿರುತ್ತಾರೆ, ಆದರೆ ಮಂಡ್ಯ ವಿಶ್ವವಿದ್ಯಾನಿಲಯ 2023 ಸೆಪ್ಟಂಬರ್ ಮಾಹೆಯಿಂದ ಕೇಂದ್ರವನ್ನು ಹಸ್ತಾಂತರ ಮಾಡಿಕೊಂಡಿರುವುದಿಲ್ಲ ಎಂದು ದೂರಿದರು.

ಕಳೆದ ಜನವರಿ 29ರಂದು ತಾತ್ಕಾಲಿಕ ಅಧ್ಯಾಪಕೇತರ ವರ್ಗದವರ ಅವಶ್ಯಕತೆ ಇರುವುದಿಲ್ಲ ಎಂದು 32 ಸಿಬ್ಬಂದಿಯನ್ನು ಕೇಂದ್ರದಿಂದ ಹೊರಹಾಕಿ ಬೀಗ ಹಾಕಿದ್ದಾರೆ. ವಿಶ್ವವಿದ್ಯಾನಿಲಯದ ಕೆಲಸ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂದು ಸೆಪ್ಟೆಂಬರ್ ನಿಂದ ಇಲ್ಲಿಯವರೆಗೂ ವೇತನ ಇಲ್ಲದೆ ಕೆಲಸ ನಿರ್ವಹಿಸುತ್ತಿದ್ದೇವೆ, ಸರ್ಕಾರ ಮತ್ತು ಮೈಸೂರು ಮಂಡ್ಯ ವಿಶ್ವವಿದ್ಯಾನಿಲಯಗಳಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮ ವಹಿಸಿಲ್ಲ ಎಂದು ದೂರಿದರು.

ತೂಬಿನಕೆರೆ ಸರ್ ಎಂ ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರದಲ್ಲಿ ಸಂಚಿತ ವೇತನ ಆಧಾರದ ತಾತ್ಕಾಲಿಕ ಅಧ್ಯಾಪಕೇತರ ಸಿಬ್ಬಂದಿಗಳ ಸೇವೆಯನ್ನು ಮುಂದುವರೆಸಬೇಕು ಎಂದು ಒತ್ತಾಯಿಸಿದರು.

ಅಧ್ಯಾಪಕೇತರ ಸಿಬ್ಬಂದಿಗಳ ಹೋರಾಟದಲ್ಲಿ ಬಿಜೆಪಿ ಮುಖಂಡ ಡಾ.ಸಿದ್ದರಾಮಯ್ಯ, ಭೂಮಿತಾಯಿ ಹೋರಾಟ ಸಮಿತಿಯ ಹನಿಯಂಬಾಡಿ ನಾಗರಾಜ್ ಭಾಗಿಯಾಗಿ ಬೆಂಬಲ ವ್ಯಕ್ತಪಡಿಸಿದರು. ಎಸ್.ಎಂ.ಶಶಿಧರ, ಮಂಚೇಗೌಡ ನೇತೃತ್ವ ವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ