Wednesday, September 11, 2024

ಪ್ರಾಯೋಗಿಕ ಆವೃತ್ತಿ

ಯಾವುದೇ ರಾಜಕೀಯಕ್ಕೆ ಬಳಸಿಕೊಳ್ಳುತ್ತಿಲ್ಲ

ಮಳವಳ್ಳಿ ತಾಲ್ಲೂಕಿನ ವಡ್ಡರಹಳ್ಳಿಯ ಬಿಎಂಸಿ ಕೇಂದ್ರದ ಉದ್ಘಾಟನಾ ಸಮಾರಂಭವನ್ನು
ಯಾವುದೇ ರಾಜಕೀಯಕ್ಕೆ ಬಳಸಿಕೊಳ್ಳುತ್ತಿಲ್ಲ ಎಂದು ಕೆಎಂಎಫ್ ನಿರ್ದೇಶಕ ವಿ.ಎಂ.ವಿಶ್ವನಾಥ್ ತಿಳಿಸಿದರು.

ಮಳವಳ್ಳಿ ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಮುಖಂಡರ ಜೊತೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಹಕಾರ ಸಂಘದಲ್ಲಿದ್ದ ನನ್ನನ್ನು ಕೆಎಂಎಫ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಮಾಡಿ ಬೆಳೆಸುತ್ತಿರುವ ತಾಲ್ಲೂಕಿನ ಎಲ್ಲಾ ಹಾಲು ಉತ್ಪಾದಕ ರೈತರಿಗೆ ಹಾಗೂ ನೌಕರರಿಗೆ ಔತಣಕೂಟ ಏರ್ಪಡಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ವಡ್ಡರಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ನೂತನವಾಗಿ
ನಿರ್ಮಿಸಿರುವ ಬಿಎಂಸಿ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ ಆಗಸ್ಟ್ 7 ರಂದು ನಿಗದಿಯಾಗಿತ್ತು.ಈಗ ಅದನ್ನು ಮುಂದೂಡಿದ್ದು ಆಗಸ್ಟ್ 14 ರಂದು ಆಯೋಜನೆ ಮಾಡಲಾಗಿದೆ ಎಂದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶಾಸಕ ಎಚ್.ಡಿ.ರೇವಣ್ಣ ಸೇರಿದಂತೆ
ಜಿಲ್ಲೆಯ ನಾಯಕರು ಭಾಗಿಯಾಗಲಿದ್ದಾರೆ ಎಂದರು.

ಬಿಎಂಸಿ ಕೇಂದ್ರವನ್ನು ಮರು ಉದ್ಘಾಟನೆ ನೆಪದಲ್ಲಿ ರೈತರು ಹಾಗೂ ಡೈರಿ ನೌಕರರನ್ನು ಸೇರಿಸಿ, ಕಾರ್ಯಕ್ರಮ್ಕಕ್ಕೆ ಜೆಡಿಎಸ್ ನಾಯಕರನ್ನು ಮಾತ್ರ ಆಹ್ವಾನಿಸಿ ಪಕ್ಷ ರಾಜಕಾರಣ ಮಾಡುತ್ತಿದ್ದಾರೆ ಎಂಬ ಕಾಂಗ್ರೆಸ್ ಮುಖಂಡರ ಟೀಕೆ ನನಗೆ ಆರ್ಶೀವಾದವಿದ್ದಂತೆ ಎಂದರು.

ಬಿಎಂಸಿ ಕೇಂದ್ರ ಪ್ರಾಯೋಗಿಕವಾಗಿ ಕಾರ್ಯಾರಂಭಿಸಿದ್ದು, ಇನ್ನೂ ಅಧಿಕೃತವಾಗಿ ಉದ್ಘಾಟನೆಗೊಂಡಿಲ್ಲ. ಅಲ್ಲದೇ ತಾಲ್ಲೂಕಿನ ಇನ್ನೂ ಹೆಚ್ಚುವರಿ ಐದು ಬಿಎಂಸಿ ಕೇಂದ್ರಗಳ ಅವಶ್ಯಕತೆ ಇದೆ ಎನ್ನುವುದನ್ನು ಕಾಂಗ್ರೆಸ್ಮು ಖಂಡರು ಅರ್ಥ ಮಾಡಿಕೊಳ್ಳಬೇಕು ಎಂದರು.

ಹಾಲಿಗೆ ನೀರು ಬೆರಸಿರುವ ಪ್ರಕರಣ ಸಂಬಂಧ ಈಗಾಗಲೇ ತನಿಖೆ ನಡೆಯುತ್ತಿದ್ದು, ಹಗರಣವನ್ನು ಹೊರಗೆ ತಂದಿದ್ದು, ನಮ್ಮ ಆಡಳಿತ ಮಂಡಳಿ. ಅಧ್ಯಕ್ಷ ರಾಮಚಂದ್ರು ಅವರು ಉತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ, ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಶಿಕ್ಷೆ ಆಗಲಿದೆ ಎಂದು ತಿಳಿಸಿದರು.

ಜೆಡಿಎಸ್ ತಾಲ್ಲೂಕು ಯುವ ಘಟಕದ ಅಧ್ಯಕ್ಷ ಚಂದಹಳ್ಳಿ ಶ್ರೀಧರ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲೇಗೌಡ, ಮುಖಂಡರಾದ ನಿಂಗರಾಜು, ತಮ್ಮೇಗೌಡ ಸೇರಿದಂತೆ ಹಲವರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!