Wednesday, September 11, 2024

ಪ್ರಾಯೋಗಿಕ ಆವೃತ್ತಿ

ಪಿಎಸ್ಐ ಅನುಮಾನಸ್ಪದ ಸಾವು| ಕೂಲಂಕಷ ತನಿಖೆಗೆ ಗೃಹಸಚಿವ ಡಾ.ಪರಮೇಶ್ವರ್ ಸೂಚನೆ

ಯಾದಗಿರಿ ಪಿಎಸ್ಐ ಅನುಮಾನಸ್ಪದ ಸಾವು ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ‌ ಶನಿವಾರ ಮಾತನಾಡಿ, “ಆತ್ಮಹತ್ಯೆ ಮಾಡಿಕೊಂಡಿಲ್ಲ. ಡೆತ್‌ನೋಟ್ ಬರೆದಿಟ್ಟಿಲ್ಲ‌. ವರ್ಗಾವಣೆ ವಿಚಾರಕ್ಕೆ ನೊಂದಿದ್ದರು ಎಂದು ಆತನ ಪತ್ನಿ ದೂರು ಕೊಟ್ಟಿದ್ದಾರೆ. ಅವರ ಆರೋಪವನ್ನು ಪರಿಗಣಿಸುತ್ತೇನೆ. ಆ ಆಯಾಮದಲ್ಲಿ ತನಿಖೆ ನಡೆಯಲಿದೆ. ಪ್ರಾಥಮಿಕ‌ ಮಾಹಿತಿ ಕಲೆ ಹಾಕುತ್ತಿದ್ದಾರೆ.‌ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಿದ್ದಾರೆ” ಎಂದು ಹೇಳಿದರು.

“ಸ್ಥಳೀಯ ಶಾಸಕರಿಗೆ ಹಣ ಕೊಟ್ಟಿದ್ದರು ಎಂಬ ಆರೋಪವನ್ನು ಸರಿ ಅಥವಾ ಇಲ್ಲ ಅಂತ ಹೇಳಲು ಬರುವುದಿಲ್ಲ. ತನಿಖೆ ನಡೆಸಿದ ನಂತರ ಸತ್ಯಾಂಶ ಹೊರಬರಲಿದೆ. ನಾನು ಸಮುದಾಯ ಯಾವುದು ಎಂಬುದನ್ನು ನೋಡುವುದಿಲ್ಲ. ಕಾನೂನನ್ನು ನೋಡುತ್ತೇನೆ. ಆ ರೀತಿಯ ಘಟನೆ‌ ನಡೆದಾಗ ಎಫ್‌ಐಆರ್ ಹಾಕಿಕೊಳ್ಳಬೇಕು. ಎಫ್‌ಐಆರ್ ದಾಖಲಿಸುವ ಮುನ್ನ ಪರಿಶೀಲನೆ ನಡೆಸುತ್ತಾರೆ. ಶಾಸಕರು ಇದ್ದರು ಅಥವಾ ಬೇರೆಯವರಿದ್ದರು, ಆಡಳಿತ ಪಕ್ಷದ ಶಾಸಕರಾಗಿದ್ದರು ಸಹ ಎಫ್ಐಆರ್ ದಾಖಲಿಸುತ್ತಾರೆ” ಎಂದು ತಿಳಿಸಿದರು.

ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿ, “ಬಿಜೆಪಿ ಮತ್ತು ಜೆಡಿಎಸ್‌ನವರು ಪಾದಯಾತ್ರೆಯನ್ನು ಕಾನೂನು ಬಾಹಿರವಾಗಿ ಮಾಡುವುದಿಲ್ಲ. ಶಾಂತಿಯುತವಾಗಿ ನಡೆಸುವುದಾಗಿ ಕೇಳಿಕೊಂಡಿದ್ದರಿಂದ ಸಿಎಂ ಜೊತೆ ಚರ್ಚಿಸಿ ಅವಕಾಶ ನೀಡಿದ್ದೇವೆ. ಯಾವುದೇ ರೀತಿಯ ಅಹಿತಕರ ಘಟನೆಗಳಾಗಬಾರದು, ಜನರಿಗೆ ತೊಂದರೆಗಳಾಗದಂತೆ ನೋಡಿಕೊಳ್ಳುವಂತೆ ಕಂಡಿಷನ್ ಹಾಕಲಾಗಿದೆ” ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!