ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅಶ್ವತಿ ಇಂದು ಶ್ರೀರಂಗಪಟ್ಟಣ ತಾಲ್ಲೂಕಿನ ಹಲವೆಡೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ನಿಮಿಷಾಂಭ ದೇಗುಲದ ಬಳಿ, ಸ್ನಾನಘಟ್ಟ, ವೆಲ್ಲೆಸ್ಲಿ ಸೇತುವೆ ,ಗಂಜಾಂ, ಗೊಸಾಯ್ ಘಾಟ್ ಹಾಗೂ ಇತರೆ ಜಲಾವೃತಗೊಳ್ಳುವ ಪ್ರದೇಶಗಳ ಬಳಿ ಬ್ಯಾರಿಕೇಡ್, ಸೂಚನಾ ಫಲಕಗಳನ್ನು ಅಳವಡಿಸಿ ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಮಾಹಿತಿ ನೀಡುವ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ನಗರೋತ್ಥಾನ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.
ಸ್ಥಳ ಪರಿಶೀಲನೆ ವೇಳೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷರಾ ಮಣಿ, ಪುರಸಭೆ ಮುಖ್ಯಾಧಿಕಾರಿ ಮತ್ತು ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.