Sunday, May 19, 2024

ಪ್ರಾಯೋಗಿಕ ಆವೃತ್ತಿ

ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪುನೀತ್ ರಾಜ್‍ಕುಮಾರ್ ಸ್ಮರಣೆ

ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್‍ಕುಮಾರ್ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವ ಹಿನ್ನೆಲೆಯಲ್ಲಿ ಎನ್ಎಸ್ಎಸ್ ಶಿಬಿರಾರ್ಥಿಗಳು ಅಪ್ಪು ಪುನೀತ್ ರಾಜ್‍ಕುಮಾರ್ ಸ್ಮರಣೆ ಮಾಡಿದರು.

ಮಳವಳ್ಳಿ ತಾಲ್ಲೂಕಿನ ದೇಶವಳ್ಳಿ ಗ್ರಾಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯಡಿ ಶಾಂತಿ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವ ದಿನದಂದು ಪುನೀತ್ ರಾಜ್ ಕುಮಾರ್ ರವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸೂಚಿಸಲು ಶಿಬಿರದಲ್ಲಿ ವಿಶಿಷ್ಟವಾಗಿ ಅಪ್ಪು ಸ್ಮರಣೆ ಮಾಡಲಾಯಿತು. ಅಪ್ಪು ಸ್ಮರಣೆಯ ಅಂಗವಾಗಿ ನಡೆದ ವಿಶೇಷ ಭೋಜನ ಕೂಟದಲ್ಲಿ ವಿದ್ಯಾರ್ಥಿಗಳು ಕೈ ಮುಗಿದು ಪುನೀತ್ ರಾಜ್‍ಕುಮಾರ್ ಅವರ ಸ್ಮರಣೆ ಮಾಡಿದರು.

ಪುನೀತ್ ರಾಜ್‍ಕುಮಾರ್ ಅವರು ತಮ್ಮ ಚಲನಚಿತ್ರಗಳ ಮೂಲಕ ರಾಜ್ಯದ ಜನರ‌ ಮನಸ್ಸಿನಲ್ಲಿದ್ದಾರೆ. ಅವರು ಮಾಡಿರುವ ಸೇವಾ ಕಾರ್ಯಗಳು ರಾಜ್ಯದ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ನಿಂತಿದೆ ಎಂದು ಸ್ಮರಿಸಿದರು. ಈ ವಿಶಿಷ್ಟ ಕಾರ್ಯಕ್ರಮವನ್ನು ಕಂಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

ಆರೋಗ್ಯ ತಪಾಸಣೆ

ಪ್ರಾಥಮಿಕ ಆರೋಗ್ಯ ಕೇಂದ್ರ ಕಿರುಗಾವಲು ಅವರ ವತಿಯಿಂದ ಶಿಬಿರಾರ್ಥಿಗಳಿಗೆ ಮತ್ತು ಗ್ರಾಮಸ್ಥರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಯಿತು. ಬಿಪಿ, ಶುಗರ್ ಚಿಕಿತ್ಸೆ ಸೇರಿದಂತೆ ಸಣ್ಣಪುಟ್ಟ ಕಾಯಿಲೆಗಳ ತಪಾಸಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿಗಳಾದ ಸಿದ್ಧರಾಜು,ಚಂದ್ರು, ಸಹ ಶಿಬಿರಾಧಿಕಾರಿಗಳಾದ ಕಾವ್ಯ, ಎಂ. ಹರಿಪ್ರಸಾದ್ ,ಚಂದ್ರು ಸೇರಿದಂತೆ ಹಲವರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!