ಉತ್ತರ ಪ್ರದೇಶ: ಕೆಲಸಕ್ಕೆ ಸೇರಿದ ಮೊದಲ ದಿನವೇ ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ.
ಉತ್ತರ ಪ್ರದೇಶದ ಉನ್ನಾವೊದಲ್ಲಿ ಏಪ್ರಿಲ್ 29 ರಂದು 18 ವರ್ಷದ ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ.
ನ್ಯೂ ಜೀವನ್ ಆಸ್ಪತ್ರೆಯಲ್ಲಿ ಗೋಡೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿತ್ತು.
ಕೆಲಸಕ್ಕೆ ಸೇರಿದ ಮೊದಲ ದಿನವೇ ನರ್ಸ್ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ.
ಆದರೆ,ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಕಳೆದು ಕೆಲವರ್ಷಗಳಿಂದ ಉತ್ತರ ಪ್ರದೇಶದ ಭಾಗಗಳಲ್ಲಿ ಅತ್ಯಾಚಾರದ, ಮಹಿಳಾ ವಿರೋಧಿ ಪ್ರಕರಣಗಳು ಹೆಚ್ದಾಗುತ್ತಿರುವುದು ಕಂಡುಬರುತ್ತಿದೆ.
ಇದನ್ನು ಓದಿ: ನಾಡಿನ ಸಾಮರಸ್ಯ ಉಳಿವಿಗಾಗಿ ಬಹು ಸಂಸ್ಕೃತಿ ಸಾಮರಸ್ಯ ಮೇಳ