Sunday, May 19, 2024

ಪ್ರಾಯೋಗಿಕ ಆವೃತ್ತಿ

ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯ ವೃದ್ಧಿಸಿಕೊಳ್ಳಿ

ಸರ್ಕಾರದ ಪೌಷ್ಟಿಕ ಆಹಾರ ಯೋಜನೆಯು ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ವಿಕಸನಕ್ಕೆ ಪೂರಕವಾಗಿದ್ದು, ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯ ವೃದ್ಧಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಅನಂತರಾಜು ಸಲಹೆ ನೀಡಿದರು.

ಶ್ರೀರಂಗಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲೆಯಲ್ಲಿ ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ವತಿಯಿಂದ 1ರಿಂದ 8ನೇ ತರಗತಿಯ 2022-23 ನೇ ಸಾಲಿನ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಮತ್ತು ಕಡಲೆಕಾಯಿ ಮಿಠಾಯಿ ವಿತರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಸರ್ಕಾರ ನೀಡುತ್ತಿರುವ ಯೋಜನೆಗಳನ್ನ ಬಳಸಿಕೊಳ್ಳುವುದರ ಜೊತೆಗೆ ನಿರಂತರ ಪರಿಶ್ರಮ, ಶ್ರದ್ಧೆ ಹಾಗೂ ನಿಷ್ಠೆಯಿಂದ ಓದಿ ವಿದ್ಯಾರ್ಥಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು. ಆ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸೋಮಶೇಖರ್ ಮಾತನಾಡಿ, ಸರ್ಕಾರದ ಪೌಷ್ಟಿಕ ಆಹಾರ ಯೋಜನೆ ಶ್ಲಾಘನೀಯ. ಸದರಿ ಯೋಜನೆಯನ್ನು 9 ಹಾಗೂ 10 ನೇ ತರಗತಿಗಳಿಗೆ ವಿಸ್ತರಿಸುವಂತಾಗಬೇಕು ಎಂದು ಸರ್ಕಾರ ಹಾಗೂ ಇಲಾಖೆಗೆ ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪುರಸಭಾ ಉಪಾಧ್ಯಕ್ಷ ಗಂಜಾಂ ಕೃಷ್ಣಪ್ಪ, ಸದಸ್ಯರಾದ ಗಂಜಾಂ ಶಿವು, ಪ್ರಾಂಶುಪಾಲ ಜಯಶಂಕರ್, ಉಪಪ್ರಾಂಶುಪಾಲ ಅಶೋಕ ಕುಮಾರ್, ಎಸ್‌ಡಿಎಂಸಿ ಸದಸ್ಯರಾದ ಗಂಜಾಂ ನಳಿನಾ, ಡಾ.ಸುಜಯ್ ಕುಮಾರ್, ಮಂಜುನಾಥ್ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಸಾಹಿತಿ ಶಿವಕುಮಾರ್ ಅವರು ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಶಾಲೆಗೆ ಗರಿಷ್ಠ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!