Thursday, September 19, 2024

ಪ್ರಾಯೋಗಿಕ ಆವೃತ್ತಿ

ಪೌಷ್ಠಿಕಾಂಶದ ಆಹಾರ ಪದಾರ್ಥಗಳ ಕಿಟ್ ವಿತರಣೆ

ಶ್ರೀರಂಗಪಟ್ಟಣ ಸಾರ್ವಜನಿಕ ಆಸ್ಪತ್ರೆ  ವ್ಯಾಪ್ತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಷಯರೋಗಿಗಳಿಗೆ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಪ್ರಧಾನ ಮಂತ್ರಿ ಟಿ.ಬಿ ಮುಕ್ತ ಭಾರತ ಅಭಿಯಾನದ ನಿ- ಕ್ಷಯ ಮಿತ್ರ ಯೋಜನೆಯಡಿಯಲ್ಲಿ ಪೌಷ್ಠಿಕ ಆಹಾರ ಪದಾರ್ಥಗಳ ಕಿಟ್ ಗಳ ವಿತರಣಾ ಸಮಾರಂಭ ನಡೆಯಿತು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎನ್.ಕೆ.ವೆಂಕಟೇಶ್ ಮಾತನಾಡಿ, ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಸರ್ಕಾರದಿಂದ ಒದಗಿಸಲಾಗುವ ಉಚಿತ ಚಿಕಿತ್ಸೆಯೊಂದಿಗೆ ನಿಕ್ಷಯ ಪೋಷಣೆ ಯೋಜನೆಯಲ್ಲಿ ಚಿಕಿತ್ಸಾ ಅವಧಿಯಲ್ಲಿ ಪ್ರತಿ ತಿಂಗಳು 500 ರೂ. ಗಳನ್ನು ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಮಾಡಲಾಗುತ್ತಿದೆ ಎಂದು.

ಅಲ್ಲದೇ ಖಾಸಗಿ ಸಂಸ್ಥೆ ಸನ್ ಫ್ಯೂರ್ ಆಯಿಲ್ ಕಂಪನಿ ಅವರು ಸ್ವಯಂ ಪ್ರೇರಿತರಾಗಿ ಪೌಷ್ಠಿಕಾಂಶ ಭರಿತ ಆಹಾರ ಪದಾರ್ಥಗಳ ಕಿಟ್ ಗಳನ್ನು ನೀಡಲು ಮುಂದಾಗಿರುವುದು ಶ್ಲಾಘನೀಯ ಎಂದರು.

ಸನ್ ಫ್ಯೂರ್ ಸಂಸ್ಥೆಯ ಬಾಬು ಮಾತನಾಡಿ, ಎಲ್ಲಾ ಕ್ಷಯರೋಗಿಗಳೊಂದಿಗೆ ನಾವಿದ್ದೇವೆ, ಯಾರು ಆತಂಕ ಪಡುವ ಅಗತ್ಯವಿಲ್ಲ, 2025 ರ ವೇಳೆಗೆ ಕ್ಷಯ ಮುಕ್ತ ಭಾರತ ನಿರ್ಮಾಣಕ್ಕೆ ಬದ್ಧರಾಗೋಣ ಎಂದು ಕ್ಷಯ ರೋಗಿಗಳಿಗೆ ಧೈರ್ಯ ತುಂಬಿದರು.

ಕಾರ್ಯಕ್ರಮದಲ್ಲಿ ಪುರಸಭೆ ಉಪಾಧ್ಯಕ್ಷ ಕೃಷ್ಣಪ್ಪ, ಮುಖ್ಯ ವೈದ್ಯಾಧಿಕಾರಿ ಡಾ.ಪಿ.ಮಾರುತಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ. ಮೋಹನ್, ಪ್ರಕಾಶ್, ಕ್ಷಯರೋಗ ಆರೋಗ್ಯ ಸಂದರ್ಶಕ ಪ್ರಭಾಕರ್, ಆರೋಗ್ಯ ನಿರೀಕ್ಷಣಾಧಿಕಾರಿ ಚಂದನ, ಸನ್ ಪ್ಯೂರ್ ಸಂಸ್ಥೆಯ ಮ್ಯಾನೇಜರ್ ಮಾರುಫ್, ಸಿ.ಎಸ್.ಆರ್. ಮ್ಯಾನೇಜರ್ ಪರಾಜ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!