Thursday, September 19, 2024

ಪ್ರಾಯೋಗಿಕ ಆವೃತ್ತಿ

ಪೌಷ್ಟಿಕಾಂಶವುಳ್ಳ ಸಮತೋಲನ ಆಹಾರ ಸೇವಿಸಿದರೆ ಉತ್ತಮ ಆರೋಗ್ಯ : ಡಾ.ವೆಂಕಟೇಶ್

ಪೌಷ್ಟಿಕಾಂಶವುಳ್ಳ ಸಮತೋಲನ ಆಹಾರ ಸೇವಿಸಿದರೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ವಿ.ಸಿ.ಫಾರಂ ಪ್ರಾಧ್ಯಾಪಕ ಡಾ.ವೆಂಕಟೇಶ್ ತಿಳಿಸಿದರು.

ಮಳವಳ್ಳಿ ತಾಲ್ಲೂಕಿನ ರಾವಣಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಪರಿವರ್ತನ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ, ಲಯನ್ಸ್ ಕ್ಲಬ್ ಆಫ್ ಮಂಡ್ಯ, ಅಕ್ಷಯ ಲಯನ್ಸ್, ಆರೋಗ್ಯ ಇಲಾಖೆ, ರಕ್ಷಣಾ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ ಮಕ್ಕಳ ಆರೋಗ್ಯ ಮತ್ತು ಶುಚಿತ್ವ ಹಾಗೂ ಮಕ್ಕಳ ಹಕ್ಕುಗಳ ಕಾಯ್ದೆ ಕುರಿತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತಿಚಿನ ದಿನಗಳಲ್ಲಿ ಒತ್ತಡ ಜೀವನ ಸಾಗಿಸುತ್ತಿರುವ ಜನರು ಸುಲಭವಾಗಿ ಸಿಗುವ ಸಿಕ್ಕ ಆಹಾರವನ್ನು ಸೇವನೆ ಮಾಡುತ್ತಿರುವುದರಿಂದ ಆರೋಗ್ಯವನ್ನು ಹದೆಗೆಡುತ್ತಿರುವುದು ಹೆಚ್ಚಾಗುತ್ತಿದೆ ಇದರಿಂದ ದೇಶದೆಲ್ಲೆಡೆ ಅಪೌಷ್ಟಿಕತೆ ಅನೈರ್ಮಲ್ಯ ಹೆಚ್ಚಾಗುತ್ತಿದೆ. ಮಕ್ಕಳು ಸಮತೋಲನ ಆಹಾರವನ್ನು ಸೇವನೆ ಹವ್ಯಾಸವನ್ನು ರೂಡಿಸಿಕೊಳ್ಳಬೇಕೆಂದು ಹೇಳಿದರು.

ಡಾ.ಶ್ರುತಿ ಮಾತನಾಡಿ, ಮಕ್ಕಳಿಗೆ ಆರೋಗ್ಯ ಮತ್ತು ಶುಚಿತ್ವ ಬಹಳ ಮುಖ್ಯವಾಗಿದೆ, ಅಂಗಡಿಗಳಲ್ಲಿ ಸಿಗುವ ತಿಂಡಿ ತಿನಿಸುಗಳನ್ನು ಕಡಿಮೆ ಮಾಡಿ ಪೌಷ್ಟಿಕಾಂಶ ಹೊಂದಿರುವ ತರಕಾರಿ, ಹಣ್ಣು, ಹಂಪಲುಗಳನ್ನು ಹೆಚ್ಚಾಗಿ ನೀಡಬೇಕೆಂದು ಜಾಗೃತಿ ಮೂಡಿಸಿದರು.

ಪೊಲೀಸ್ ಇಲಾಖೆಯ ರಮೇಶ್ ಮಾತನಾಡಿ, ಸಂವಿಧಾನಾತ್ಮಕವಾಗಿ ಮಕ್ಕಳಿಗೂ ಹಲವು ಹಕ್ಕುಗಳಿವೆ, ನಮ್ಮ ಮಕ್ಕಳ ಅಂತ ಹಕ್ಕುಗಳಿಗೆ ಚ್ಯೂತಿ ತರುವಂತಿಲ್ಲ, ಎಂದು ಮಕ್ಕಳಿಗೆ ಇರುವ ಕಾಯ್ದೆಗಳ ಬಗ್ಗೆ ವಿವರಿಸಿದರು.

ಪರಿವರ್ತನ ಸಂಸ್ಥೆ ಅಧ್ಯಕ್ಷ ಪ್ರೋ.ಶಂಕರೇಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಪುಟ್ಟಸ್ವಾಮಿ, ಆರ್.ಎನ್.ಪರಶಿವಮೂರ್ತಿ, ಟಿ.ಡಿ.ನಾಗರಾಜು ಮುಖ್ಯ ಶಿಕ್ಷಕಿ, ಪುಷ್ಪಾವತಿ, ಬಸವರಾಜು, ಸಿ.ಮಹದೇವ್, ಮುಕುಂದ, ಅಮೃತಾ ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!