Thursday, September 19, 2024

ಪ್ರಾಯೋಗಿಕ ಆವೃತ್ತಿ

ನ್ಯಾ.ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸು : ಜಿಲ್ಲಾ ಆದಿಜಾಂಬವ ಸಂಘ ಸ್ವಾಗತ

ರಾಜ್ಯ ಸರ್ಕಾರ  ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವುದನ್ನು ಸ್ವಾಗತಿಸುವುದಾಗಿ ಮಂಡ್ಯ ಜಿಲ್ಲಾ ಆದಿ ಜಾಂಬವ ವೇದಿಕೆ ಜಿಲ್ಲಾಧ್ಯಕ್ಷ ಸಿ.ಕೆ.ಪಾಪಯ್ಯ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 11 ವರ್ಷಗಳಿಂದ ಯಾವುದೇ ಸರ್ಕಾರವು ಈ ವರದಿಯಲ್ಲಿ ಸಚಿವ ಸಂಪುಟದಲ್ಲಿಟ್ಟು ಅನುಮೋದನೆ ನೀಡಲು ಮುಂದಾಗಲಿಲ್ಲ, ಕಳೆದ 23 ವರ್ಷಗಳ ಪರಿಶಿಷ್ಟ ಜಾತಿಯ ಸಮುದಾಯಗಳಾದ ಹೊಲೆಯ, ಮಾದಿಗ ಮತ್ತು ಅದರ ಉಪಜಾತಿಗಳಿಗೆ ಕೆನೆಪದರದ ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿಯನ್ನು ವರ್ಗೀಕರಿಸಲು ಅನುವಾಗುವಂತೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ಸಚಿವ ಸಂಪುಟ ಅನುಮೋದನೆ ನೀಡಿರುದರಿಂದ ಹೊಲೆಯ ಮಾದಿಗ ಸಮುದಾಯಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಸಚಿವ ಸಂಪುಟದ ಉಪ ಸಮಿತಿಯ ಅಧ್ಯಕ್ಷ ಜಿ.ಸಿ.ಮಾಧುಸ್ವಾಮಿ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಸಚಿವ ಗೋವಿಂದ ಕಾರಜೋಳ, ಎಸ್‌.ಸಿ. ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಕೊಳ್ಳೇಗಾಲ: ಶಾಸಕ ಎನ್‌.ಮಹೇಶ್‌, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಅವರು ಈ ವರದಿ ಶಿಫಾರಸ್ಸಿಗೆ ಶ್ರಮಿಸಿದ್ದಾರೆ ಎಂದು ಸ್ಮರಿಸಿದರು.

ಈ ವರದಿ ಜಾರಿಗಾಗಿ  ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡಿದಂತಹ ಎಲ್ಲಾ ದಲಿತ ಸಂಘರ್ಷ ಸಮಿತಿಗಳು, ಹೊಲೆಯ-ಮಾದಿಗ ಎಲ್ಲಾ ಸಂಘಟನೆಗಳ ಮುಖಂಡರಿಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ನಮಗೆ ಸಹಕಾರ ನೀಡಿದ ಎಲ್ಲರಿಗೂ ಮಂಡ್ಯದ ಹೊಲೆಯ ಮಾದಿಗ ಸಮಾಜವು ಧನ್ಯವಾದಗಳನ್ನು ಅರ್ಪಿಸುತ್ತದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಮುಖಂಡರಾದ ಬಿ.ಕೃಷ್ಣ, ನಡಕಲಪುರ ಮಂಜುನಾಥ್, ಜಗದೀಶ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!