Friday, September 20, 2024

ಪ್ರಾಯೋಗಿಕ ಆವೃತ್ತಿ

ಸಿದ್ದರಾಮಯ್ಯ – ಡಿಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ದಂಡು !

ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ನಾಳೆ (ಮೇ 20) ಮಧ್ಯಾಹ್ನ 12.30ಕ್ಕೆ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದು, ಈ ಕಾರ್ಯಕ್ರಮಕ್ಕೆ ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ದಂಡೇ ಹರಿದು ಬರಲಿದೆ.

nudikarnataka.com

ದಕ್ಷಿಣ ಭಾರತದಲ್ಲಿ ಬಿಜೆಪಿಯ ನಾಗಲೋಟಕ್ಕೆ ಕರ್ನಾಟಕದ ಅಹಿಂದ ನಾಯಕ ಸಿದ್ದರಾಮಯ್ಯ, ಒಕ್ಕಲಿಗ ನಾಯಕ ಡಿ.ಕೆ.ಶಿವಕುಮಾರ್ ಬ್ರೇಕ್ ಹಾಕಿ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯ ಅವರನ್ನು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ರಾಜ್ಯದಿಂದ ಹೊರಗಟ್ಟಿದ್ದು, ಇಡೀ ದೇಶದ ಗಮನ ಸೆಳೆದಿದೆ.

ಈ ಕಾರಣದಿಂದಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಲು ತೃಣ ಮೂಲ ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು ಉತ್ಸುಕವಾಗಿವೆ. ಆದ್ದರಿಂದ ದೇಶದ ವಿವಿಧ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿಯೇತರ ಮುಖ್ಯಮಂತ್ರಿಗಳನ್ನು ಒಂದು ಸೇರಿಸುವ ಪ್ರಯತ್ನ ನಡೆದಿದೆ, ಅದಕ್ಕಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಈ ಕಾರ್ಯಕ್ರಮಕ್ಕೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್ ಕುಮಾರ್, ಛತ್ತೀಸ್‌ಘಡ ಸಿಎಂ ಭೂಪೇಶ್ ಬಘೇಲ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಗಮಿಸುವ ಸಾಧ್ಯತೆ ಇದೆ.

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ಮಿತ್ರಪಕ್ಷಗಳ ನಾಯಕರನ್ನು ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!