Saturday, May 18, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಮತ್ತೇ ಗೆದ್ದರೆ ಒಬಿಸಿ ಮೀಸಲಾತಿ ರದ್ದು ಮಾಡಲಿದೆ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ನಡೆಯುತ್ತಿರುವ ನಡುವೆ, “ಮುಂದಿನ ದಿನಗಳಲ್ಲಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿಯನ್ನು ಸಂಪೂರ್ಣವಾಗಿ ತೆಗೆದುಹಾಕಲು ಬಿಜೆಪಿ ಯೋಜಿಸುತ್ತಿದೆ” ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆರೋಪಿಸಿದ್ದಾರೆ.

ಬಿಜೆಪಿ ತನ್ನ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ವರ್ಷವಾದ 2025 ರ ವೇಳೆಗೆ ಮೀಸಲಾತಿಯನ್ನು ರದ್ದುಗೊಳಿಸಲಿದೆ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.

“2025ರ ವೇಳೆಗೆ ಆರ್‌ಎಸ್‌ಎಸ್‌ 100 ವರ್ಷ ಪೂರೈಸಲಿದೆ. 2025ರ ವೇಳೆಗೆ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕಿತ್ತು ಹಾಕಲು ಪ್ರಯತ್ನಿಸುತ್ತಿದ್ದಾರೆ. ಹಲವು ಬಾರಿ ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರು ಮೀಸಲಾತಿ ಕುರಿತು ಪ್ರತಿಕ್ರಿಯಿಸಿದ್ದಾರೆ” ಎಂದು ಗುರುವಾರ ಸಾರ್ವಜನಿಕ ಸಭೆಯಲ್ಲಿ ರೇವಂತ್ ರೆಡ್ಡಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳಿಗೆ (ಬಿಸಿ) ಮೀಸಲಾತಿಯನ್ನು ಪ್ರಸ್ತಾಪಿಸಿದ ಮಂಡಲ್ ಆಯೋಗದ ವರದಿಯ ಅನುಷ್ಠಾನವನ್ನು ಬಿಜೆಪಿ ಈ ಹಿಂದೆ ಸ್ಥಗಿತಗೊಳಿಸಿತ್ತು. ಈಗ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಕೋಟಾಗಳನ್ನು ರದ್ದುಗೊಳಿಸಲು ಸಂಸತ್ತಿನಲ್ಲಿ ಅಧಿಕ ಸಂಖ್ಯೆಯಲ್ಲಿರುವುದು ಮುಖ್ಯ. ಅದಕ್ಕಾಗಿ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವುದು ಬಿಜೆಪಿಯ ಗುರಿಯಾಗಿದೆ” ಎಂದು ಈ ಸಂದರ್ಭದಲ್ಲೇ ರೇವಂತ್ ರೆಡ್ಡಿ ಆರೋಪಿಸಿದರು.

“ಮೀಸಲಾತಿಯನ್ನು ರದ್ದುಪಡಿಸಲು ಪ್ರಯತ್ನಿಸುತ್ತಿರುವ ಬಿಜೆಪಿಯನ್ನು ಕೆಲವೇ ಜನರು ಬೆಂಬಲಿಸುತ್ತಿದ್ದಾರೆ. ಈ ಲೋಕಸಭಾ ಚುನಾವಣೆಗಳು ಎಸ್‌ಸಿ, ಎಸ್‌ಟಿ, ಬಿಸಿ ಮೀಸಲಾತಿಯ ಜನಾಭಿಪ್ರಾಯ” ಎಂದರು.

ಇನ್ನು ಬುಧವಾರ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, “ಕಾಂಗ್ರೆಸ್ ಎಸ್‌ಸಿ/ಎಸ್‌ಟಿ/ಒಬಿಸಿಗಳಿಂದ ಮೀಸಲಾತಿಯನ್ನು ಕಿತ್ತು ತನ್ನ ವಿಶೇಷ ವೋಟ್ ಬ್ಯಾಂಕ್‌ಗೆ ನೀಡಲು ಬಯಸುತ್ತದೆ” ಎಂದು ಪ್ರಧಾನಿ ಆರೋಪಿಸಿದ್ದರು. ಧರ್ಮದ ಆಧಾರದ ಮೇಲೆ ಮೀಸಲಾತಿ ನೀತಿಗಳನ್ನು ರಾಜಕೀಯಗೊಳಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ದೂರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!