Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಮಾಜದಲ್ಲಿ ಉನ್ನತ ಸ್ಥಾನಗಳನ್ನೇರಲು ಶಿಕ್ಷಕರ ಪಾತ್ರ ಅನನ್ಯ : ಶಾಸಕ ಕೆ.ಎಂ. ಉದಯ್

ವರದಿ: ಪ್ರಭು ವಿ.ಎಸ್.

ವಿದ್ಯಾರ್ಥಿಗಳ ಅಂಕುಡೊಂಕುಗಳನ್ನು ತಿದ್ದಿ ಸಮಾಜದಲ್ಲಿ ಉನ್ನತ ಸ್ಥಾನಗಳನ್ನೇರಲು ಶಿಕ್ಷಕರ ಪಾತ್ರ ಅನನ್ಯವಾಗಿದ್ದು ಸಮಾಜಕ್ಕೆ ಶಿಕ್ಷಕರು ತಮ್ಮದೇ ಆದ ಕೊಡುಗೆಗಳನ್ನು ನೀಡುತ್ತಿರುವುದು ಶ್ಲಾಘನೀಯವೆಂದು ಶಾಸಕ ಕೆ.ಎಂ. ಉದಯ್ ಅಭಿಪ್ರಾಯಪಟ್ಟರು.

ಮದ್ದೂರು ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಜತೆಗೆ ಸಮಾಜಕ್ಕೆ ಭದ್ರ ಬುನಾದಿ ಹಾಕಿದ ಶಿಕ್ಷಕರನ್ನು ಎಂದಿಗೂ ಮರೆಯಬಾರದು ಇಂತಹ ಶಿಕ್ಷಕರಿಂದಲೇ ಸಮಾಜ ಅಭಿವೃದ್ಧಿ ಹೊಂದಿ ಉನ್ನತೀಕರಣಕ್ಕೆ ಸಾಕ್ಷಿಯಾಗುತ್ತದೆಂದರು.

ಶಿಕ್ಷಣವಿಲ್ಲದೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಸಾಮಾನ್ಯ ಜ್ಞಾನ, ಗುರಿ, ಸಾಧನೆ ಉನ್ನತ ಸ್ಥಾನ ಮಾನಗಳನ್ನು ಪಡೆಯಲು ಶಿಕ್ಷಣ ಅತ್ಯವಶ್ಯಕವಾಗಿದ್ದು ಇತ್ತೀಚಿನ ದಿನಗಳಲ್ಲಿ ವಿದ್ಯೆ ಕಲಿಸಿದ ಗುರುಗಳನ್ನು ಗೌರವಿಸುವ ಪ್ರವೃತ್ತಿ ಕಡಿಮೆಯಾಗುತ್ತಿರುವುದು ವಿಷಾಧನೀಯ ಸಂಗತಿ ಎಂದರು.

ಶಿಕ್ಷಕರು ಕೇವಲ ವೇತನವನ್ನೇ ಅವಲಂಭಿಸಿದ್ದು ಜತೆಗೆ ಮೂಲ ಸೌಲಭ್ಯಗಳು ಸಿಗದೆ ಪರಿತಪಿಸುವಂತಾಗಿದ್ದು ಮುಂದಿನ ದಿನಗಳಲ್ಲಿ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಲವಾರು ಸೌಲಭ್ಯಗಳನ್ನು ಒದಗಿಸಿ ಗುರುವಂದನಾ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡುವ ಭರವಸೆ ನೀಡಿದರು.

ಗುರುಭವನ ಆಧುನೀಕರಣ :
ಕಳೆದ ಹಲವಾರು ವರ್ಷಗಳಿಂದಲೂ ಶಿಥಿಲಾವಸ್ಥೆಯಲ್ಲಿರುವ ಶಿಕ್ಷಕರ ಗುರುಭವನವನ್ನು ನೂತನವಾಗಿ ನಿರ್ಮಿಸಲು ಸಂಬಂಧಿಸಿದ ಸಚಿವರೊಟ್ಟಿಗೆ ಚರ್ಚಿಸಿದ್ದು ಜತೆಗೆ ಸರಕಾರಿ ಶಾಲೆಗಳ ಉನ್ನತೀಕರಣಕ್ಕೂ ಹೆಚ್ಚಿನ ಒತ್ತು ನೀಡಿರುವುದಾಗಿ ಹೇಳಿದರು.

ಪುಷ್ಪ ನಮನ :
ಕಾರ್ಯಕ್ರಮಕ್ಕೂ ಮುನ್ನ ಮಾಜಿ ರಾಷ್ಟçಪತಿ ಸರ್ವಪಲ್ಲಿ ಡಾ. ರಾಧಾಕಷ್ಣನ್, ಸಾವಿತ್ರಿ ಬಾಪುಲೆ ಅವರ ಭಾವಚಿತ್ರಕ್ಕೆ ಶಾಸಕರು ಹಾಗೂ ಗಣ್ಯರು ಪುಷ್ಪನಮನ ಸಲ್ಲಿಸಿದರು.

ಅಭಿನಂದನೆ :
ಇತ್ತೀಚಿನ ದಿನಗಳಲ್ಲಿ ನಿರಂತರ ಸೇವೆಯೊಟ್ಟಿಗೆ ವಯೋ ನಿವೃತ್ತಿಗೊಂಡ ಶಿಕ್ಷಕರು ಹಾಗೂ ಅಕಾಲಿಕ ಮರಣಕ್ಕೆ ತುತ್ತಾದ ಶಿಕ್ಷಕರ ಕುಟುಂಬ ಸದಸ್ಯರು ಜತೆಗೆ ರಾಜ್ಯ ಪ್ರಶಸ್ತಿ ವಿಜೇತ ಸಾಧಕ ಶಿಕ್ಷಕರನ್ನು ಕಾರ್ಯಕ್ರಮದ ವೇಳೆ ಅಭಿನಂದಿಸಿ ಗೌರವಿಸಲಾಯಿತು.

ನಿವೃತ್ತ ವಿಷಯ ಪರಿವೀಕ್ಷಕ ಎಸ್. ಲೋಕೇಶ್ ಸರ್ವಪಲ್ಲಿ ರಾಧಾಕೃಷ್ಣ ಮತ್ತು ಸಾವಿತ್ರಿಬಾಯಿಪುಲೆ ಅವರ ಕುರಿತು ಪ್ರಧಾನ ಭಾಷಣ ನಡೆಸಿಕೊಟ್ಟರು.

ಈ ವೇಳೆ ಬಿಇಓ ಸಿ.ಎಚ್ ಕಾಳೀರಯ್ಯ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಡಾ. ಮಂಗಳಮ್ಮ, ಸಮನ್ವಯಾಧಿಕಾರಿ ಹನುಮಶೆಟ್ಟಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರವೀಶ್, ಉಪನ್ಯಾಸಕರ ಸಂಘದ ಅಧ್ಯಕ್ಷ ಅಂಕೇಗೌಡ, ಸರಕಾರಿ ನೌಕರರ ಸಂಘದ ಅಧ್ಯಕ್ಷ ರವಿಕುಮಾರ್, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ದೇವರಾಜು, ಮುಖಂಡ ಬಿ.ವಿ. ಶಂಕರೇಗೌಡ, ಸಂಯೋಜನಾಧಿಕಾರಿ ಹೇಮಲತಾ ಹಾಗೂ ವಿವಿಧ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!