ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಮಂಡ್ಯ ತಾಲ್ಲೂಕಿನ ಕೋಲಕಾರನದೊಡ್ಡಿ ಗ್ರಾಮದ ಕೆ.ಸಿ.ಚನ್ನೇಗೌಡ ಅವರನ್ನು ನೇಮಕ ಮಾಡಿ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮಿ ನಾರಾಯಣ ಅವರು ಆದೇಶ ಹೊರಡಿಸಿದ್ದಾರೆ.
ತಾವು ಎಂದಿನಂತೆ ಕಾಂಗ್ರೆಸ್ ಪಕ್ಷದ ಸಂಘಟನೆ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಸಬಲೀಕರಣ, ಬಲವರ್ಧನೆಯಲ್ಲಿ ತೊಡಗಿಸಿಕೊಂಡು ಪಕ್ಷ ಸಂಘಟನೆಗೆ ಮುಂದಾಗುವಂತೆ ತಿಳಿಸಿದ್ದಾರೆ.