Thursday, September 19, 2024

ಪ್ರಾಯೋಗಿಕ ಆವೃತ್ತಿ

ದಸರಾ ಉತ್ಸವ| ಸರೋದ್‌ ವಾದಕ ಪಂ.ರಾಜೀವ್‌ ತಾರನಾಥ್‌ ಬಳಿ ಪರ್ಸೆಂಟೇಜ್‌ ಕೇಳಿದ ಅಧಿಕಾರಿಗಳು ?

ನಾಡಹಬ್ಬ ದಸರಾ ಸಾಂಸ್ಕೃತಿಕ ಉತ್ಸವದಲ್ಲಿ ಕಾರ್ಯಕ್ರಮ ನೀಡಲು  ಅಂತಾರಾಷ್ಟ್ರೀಯ ಖ್ಯಾತೀಯ ಸರೋದ್‌ ವಾದಕ ಪಂ.ರಾಜೀವ ತಾರನಾಥ್‌ ಅವರನ್ನು ಆಹ್ವಾನಿಸಿದ ದಸರಾ ಅಧಿಕಾರಿಗಳು ಸಂಭಾವನೆಯಲ್ಲಿ ಕಮಿಷನ್‌ಗೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದೆ. ಇದೆ ಕಾರಣಕ್ಕೆ ದಸರಾದಲ್ಲಿ ಅವರ ಕಾರ್ಯಕ್ರಮಕ್ಕೆ ಕತ್ತರಿ ಬಿದ್ದಿದೆ ಎಂದು ಹೇಳಲಾಗುತ್ತಿದೆ.

ದಸರಾ ಅರಮನೆ ವೇದಿಕೆಯಲ್ಲಿ ಕಾರ್ಯಕ್ರಮ ನೀಡಲು ಆಹ್ವಾನಿಸಿದ ಅಧಿಕಾರಿಗಳು ಬಳಿಕ ಕಮಿಷನ್‌ಗೆ ಬೇಡಿಕೆ ಮುಂದಿಟ್ಟಿದ್ದರು ಎಂದು ಸ್ವತಃ ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಅವರು ಆರೋಪಿಸಿದ್ದರು.

ದಸರಾ ಅರಮನೆ ವೇದಿಕೆಯಲ್ಲಿ ಕಾರ್ಯಕ್ರಮ ನೀಡಲು ಅಧಿಕಾರಿಗಳು ತಾರನಾಥ್‌ ಅವರ ಮನೆಗೆ ಭೇಟಿ ನೀಡಿ ಆಗ್ರಹಿಸಿದ್ದರು ಎನ್ನಲಾಗಿದೆ.

“>

 

ಈ ಕುರಿತು ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ ಪಂ.ರಾಜೀವ ತಾರನಾಥ್‌, ಕಮಿಷನ್‌ ಚಟುವಟಿಕೆಯ ಮೂಲಕ ಕಲಾವಿದರನ್ನು ಶೋಷಣೆ ಮಾಡಲಾಗುತ್ತಿದೆ. ಕಾರ್ಯಕ್ರಮ ನೀಡದಿದ್ದರೂ ಪರವಾಗಿಲ್ಲ ಎಂದು ನಾನು ಇಂತಹ ಕೃತ್ಯಗಳನ್ನು ಪ್ರೋತ್ಸಾಹಿಸಿಲ್ಲ. ಬೇರೆ ರಾಜ್ಯಗಳಲ್ಲಿ ಸ್ಥಳೀಯ ಕಲಾವಿದರನ್ನು ಪ್ರೋತ್ಸಾಹಿಸುವ ವಾಡಿಕೆ ಇದೆ. ಆದರೆ ನಮ್ಮಲ್ಲಿ ಅದಕ್ಕೆ ವಿರುದ್ಧವಾದ ವಾತಾವರಣ ಇದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಹೆಚ್‌ ಸಿ ಮಹದೇವಪ್ಪ, ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಅವರ ಬಳಿಯಲ್ಲಿ ದಸರಾ ಕಾರ್ಯಕ್ರಮ ನೀಡಲು ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು ಸಾಂಸ್ಕೃತಿಕ ನಗರಿಯ ಹೆಸರಿಗೆ ಕಳಂಕ ತರುವ ಕೆಲಸ ಮಾಡಿರುವ ಯಾರೇ ಆಗಿದ್ದರೂ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕಠಿಣ ಕ್ರಮ ಜರುಗಿಸಲು ಸೂಚಿಸಿರುತ್ತೇನೆ ಎಂದು ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!