Tuesday, April 30, 2024

ಪ್ರಾಯೋಗಿಕ ಆವೃತ್ತಿ

ಒಕ್ಕಲಿಗ ಸಮುದಾಯ ಸಂಪೂರ್ಣ ಜೆಡಿಎಸ್ ಪರವಿದೆ ಎನ್ನುವುದು ಸುಳ್ಳು : ಮಲ್ಲಯ್ಯ

ಒಕ್ಕಲಿಗ ಸಮುದಾಯ ಸಂಪೂರ್ಣವಾಗಿ ಜೆಡಿಎಸ್ ಪರವಿದೆ ಎನ್ನುವುದು ಸುಳ್ಳು. ಈ ಹೇಳಿಕೆಯನ್ನು ಜೆಡಿಎಸ್ ನಾಯಕರು ವಾಪಸ್ ತೆಗೆದುಕೊಳ್ಳಬೇಕು ಎಂದು ಮಳವಳ್ಳಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಎಂ.ಬಿ.ಮಲ್ಲಯ್ಯ ಎಚ್ಚರಿಕೆ ನೀಡಿದರು.

ಮಳವಳ್ಳಿ ಪಟ್ಟಣದ ಶಾಂತಿ ಸಮುದಾಯ ಭವನದಲ್ಲಿ ಮಾಜಿ ಸಚಿವ ಪಿ‌.ಎಂ.ನರೇಂದ್ರಸ್ವಾಮಿ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಅವರಿಂದ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ನೇಮಕಾತಿ ಪತ್ರ ಸ್ವೀಕರಿಸಿ ಮಾತನಾಡಿದರು.

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಯಾರು ಯಾವ ಪಕ್ಷವನ್ನು ಬೇಕಾದರೂ ಸೇರಬಹುದಾಗಿದ್ದು, ಒಕ್ಕಲಿಗ ಸಮುದಾಯ ಮುಖಂಡರು ಎಲ್ಲಾ ಪಕ್ಷದಲ್ಲಿಯೂ ಇದ್ದಾರೆ. ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದ ಮುಖಂಡರಿಗೆ ಸಮಾನ ಅವಕಾಶ ಕಲ್ಪಿಸಿದೆ. ಆದರೆ ಜೆಡಿಎಸ್ ಪಕ್ಷದಲ್ಲಿ ಎಲ್ಲಾ ಸಮುದಾಯದ ನಾಯಕರು ಇದ್ದಾರೆ ಎನ್ನುವುದನ್ನು ಸ್ವಷ್ಟಪಡಿಸಲಿ.ಜೆಡಿಎಸ್‌ನ ಆನಗತ್ಯ ಟೀಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ, ಜೊತೆಗೆ ಯಾವುದಕ್ಕೂ ಹೆದುರುವುದಿಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನನ್ನನ್ನು ನಂಬಿ ಕಾರ್ಯಾಧ್ಯಕ್ಷ ಸ್ಥಾನವನ್ನು ನೀಡಿದ್ದು, ಅವರ ನಂಬಿಕೆಗೆ ಚ್ಯುತಿ ಬರದ ರೀತಿಯಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕತೆ ಯಿಂದ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಲು ಮುಂದಾಗುತ್ತೇನೆಂದು ಭರವಸೆ ನೀಡಿದರು.

ಜನ ಆಶೀರ್ವದಿಸಿದ್ದಾರೆ

ಜೆಡಿಎಸ್ ನಾಯಕರು ಕಾಂಗ್ರೆಸ್ ಪಕ್ಷ ಹಾಗೂ ನಮ್ಮ ನಾಯಕರಾದ ಪಿ.ಎಂ.ನರೇಂದ್ರಸ್ವಾಮಿ ಬಗ್ಗೆ ಏನೇ ಟೀಕೆ ಮಾಡಲಿ. ಅದಕ್ಕೆ ನಾವು ಪ್ರತಿಕ್ರಿಯೆ ಮಾಡಲ್ಲ‌. ಮಳವಳ್ಳಿ ಕ್ಷೇತ್ರದ ಅಭಿವೃದ್ಧಿಗೆ ನರೇಂದ್ರಸ್ವಾಮಿ ಅವರೇ ಆಯ್ಕೆಯಾಗಬೇಕೆಂದು ಮತದಾರರು ಅದಾಗಲೇ ಆಶೀರ್ವಾದ ಮಾಡಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯನವರು ಸಿಎಂ ಆಗಿದ್ದ ಸಂದರ್ಭದಲ್ಲಿ ಕ್ಷೇತ್ರಕ್ಕೆ ನೀಡಿದ ಅನುದಾನ ಹಾಗೂ ನರೇಂದ್ರಸ್ವಾಮಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಜನತೆಗೆ ತಿಳಿದಿದ್ದು, ಜೆಡಿಎಸ್ ನಾಯಕರು ಏನಾದರೂ ಟೀಕೆ ಮಾಡಿಕೊಳ್ಳಲಿ, ನಮ್ಮ ನಾಯಕರಾದ ನರೇಂದ್ರಸ್ವಾಮಿ ಗೆಲುವು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದರು. ನೂತನ ಕಾರ್ಯಾಧ್ಯಕ್ಷರನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಕೃಷ್ಣಪ್ಪ, ಕೆಪಿಸಿಸಿ ಸದಸ್ಯರಾದ ಸಿದ್ದೇಗೌಡ, ಪುಟ್ಟಸ್ವಾಮಿ,
ಟಿಎಪಿಸಿಎಂಎಸ್ ಅಧ್ಯಕ್ಷ ದ್ಯಾಪೇಗೌಡ, ತಾ.ಪಂ ಮಾಜಿ ಉಪಾಧ್ಯಕ್ಷ ಸಿ. ಮಾಧು, ಎಪಿಎಂಸಿ ಮಾಜಿ ಅಧ್ಯಕ್ಷ ಅಂಬರೀಷ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸುಷ್ಮಾ, ತಾ.ಪಂ ಮಾಜಿ ಅಧ್ಯಕ್ಷ ವಿಶ್ವಾಸ್,ಸುಂದರೇಶ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೇವರಾಜು, ಸುಂದರ್‌ರಾಜು, ಖಜಾಂಚಿ ಬಂಕ್ ಮಹದೇವು ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!