ಪ್ರಸಕ್ತ ಸಾಲಿನಲ್ಲಿ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳ ವಿದೇಶಿ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಹಾಗೂ ಶೈಕ್ಷಣಿಕ ಸಾಲ ನೀಡಲು ಅರ್ಜಿಗಳನ್ನು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ವಾರ್ಷಿಕ ರೂ.3.50 ಲಕ್ಷಗಳಂತೆ ಕೋರ್ಸ್ ನ ಅವದಿಗೆ ಒಟ್ಟು 10.ಲಕ್ಷ ರೂ.ಗಳನ್ನು ಶೇ.2 ಬಡ್ಡಿ ದರದಲ್ಲಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಅ.17 ರಿಂದ ನ.30ರವರೆಗೆ ಸೇವಾ ಸಿಂಧೂ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸ ಬಹುದು.




