Friday, November 20, 2026

ಪ್ರಾಯೋಗಿಕ ಆವೃತ್ತಿ

ಒಕ್ಕಲಿಗರ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ

ಎಸ್ಸಿ, ಎಸ್ಟಿಗಳಿಗೆ ಮೀಸಲಾತಿ ಹೆಚ್ಚು ಮಾಡಿರುವಂತಯೇ 3ಎ ಅಡಿ ಬರುವ ಒಕ್ಕಲಿಗ ಜನಾಂಗಕ್ಕೆ ಮೀಸಲಾತಿಯನ್ನು ಹೆಚ್ಚು ಮಾಡಬೇಕೆಂದು ಜಿಲ್ಲಾ ಒಕ್ಕಲಿಗರ ಸಂಘ ಒತ್ತಾಯಿಸಿದೆ.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ತಿಮ್ಮೇಗೌಡ ಗೌಡಯ್ಯದೊಡ್ಡಿ ಅವರು, ಸಮುದಾಯದ ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡುವುದಾದರೆ ಶೇ.16ರಷ್ಟು ಜನಸಂಖ್ಯೆ ಹೊಂದಿರುವ ಒಕ್ಕಲಿಗ ಸಮಯದಾಯಕ್ಕೆ, ಸರ್ಕಾರ ಮೀಸಲಾತಿ ಹೆಚ್ಚು ಮಾಡಲಿ ಎಂದರು.

ಹಿಂದುಳಿದ ವರ್ಗಗಳ ಮೀಸಲಾತಿ-3ಎ ಅಡಿಯಲ್ಲಿ ಒಕ್ಕಲಿಗ ಸಮುದಾಯ ಸೇರಿದೆ. ಒಕ್ಕಲಿಗ ಉಪ ಪಂಗಡಗಳು ಹಾಗೂ ಇತರ ಜಾತಿಗಳು ಸೇರಿವೆ. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಅವರ ಜಸಂಖ್ಯೆಗೆ ಅನುಗುಣವಾಗಿ ಹೆಚ್ಚಳ ಮಾಡಿರುವುದನ್ನು ನಾವು ಸ್ವಾಗತಿಸುತ್ತೇವೆ, ಅದೇ ರೀತಿ 3ಎ ಮೀಸಲಾತಿ ಪ್ರಮಾಣವನ್ನು ಶೇ.4ರಿಂದ ಶೇ.10ಕ್ಕೆ ಹೆಚ್ಚಿಸುವ ಮೂಲಕ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.

ಒಕ್ಕಲಿಗ ಸಮುದಾಯ ಅನಾದಿಕಾಲದಿಂದಲೂ ಕೃಷಿಯನ್ನೇ ನಂಬಿ ಬದುಕಿದೆ. ಬೇಸಾಯ ವೆಚ್ಚ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದೆ, ಅತಿವೃಷ್ಟಿ, ಪ್ರವಾಹ, ಬರಗಾಲ ಹಾಗೂ ರೋಗದಿಂದ ನಾನಾ ಸಂಕಷ್ಟಗಳನ್ನು ಎದುರಿಸುತ್ತಿದೆ, ಸಮುದಾಯದ ಶೇ.70ರಷ್ಟು ಮಂದಿ ಆರ್ಥಿಕವಾಗಿ ಹಿಂದುಳಿದಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಮೀಸಲಾತಿ ಪ್ರಮಾಣವನ್ನು ಶೇ.1ರಿಂದ ಶೇ.10ಕ್ಕೆ ಏರಿಕೆ ಮಾಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿದರು.

ಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ದೇವರಾಜ್ ಪಟೇಲ್, ಕೋಣನಹಳ್ಳಿ ಮಂಜು, ರಾಮಕೃಷ್ಣ ಹಾಗೂ ಶಂಕರೇಗೌಡ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ