ಕರ್ನಾಟಕ ರಾಜ್ಯದ ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾಗಿರುವ ಮಧು ಜಿ.ಮಾದೇಗೌಡರಿಗೆ ಆಗಸ್ಟ್ 19ರಂದು ಅಭಿನಂದನೆ ಸಲ್ಲಿಸಲಾಗುವುದು ಎಂದು ವಿಶ್ರಾಂತ ಪ್ರಾಂಶುಪಾಲ ಡಾ.ಎಸ್.ಬಿ.ಶಂಕರಗೌಡ ತಿಳಿಸಿದರು.
ಮಂಡ್ಯ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ಸಮಾರಂಭದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ವಹಿಸಲಿದ್ದು, ವಿಶ್ವಮಾನದ ಕ್ಷೇತ್ರದ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮಾರಂಭ ಉದ್ಘಾಟಿಸಲಿದ್ದು, ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ನೂತನ ವಿಧಾನಪರಿಷತ್ ಸದಸ್ಯ ಮಧು ಜಿ. ಮಾದೇಗೌಡರನ್ನು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅಭಿನಂದಿಸಲಿದ್ದು,ಮುಖ್ಯ ಅತಿಥಿಗಳಾಗಿ ಮಾಜಿ ಮಾಜಿ ವಿಧಾನ ಪರಿಷತ್ ಸದಸ್ಯ ಬಿ. ರಾಮಕೃಷ್ಣ ಭಾಗವಹಿಸಲಿದ್ದು, ಪ್ರಾಂಶುಪಾಲ ಎಸ್.ಬಿ. ಶಂಕರಗೌಡ ಮಾದೇಗೌಡರ ಕುರಿತು ಅಭಿನಂದನಾ ನುಡಿಗಳನ್ನಾಡಲಿದ್ದಾರೆ ಎಂದರು.
ಸುದ್ದಿಗೋಷ್ಟಿಯಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ಜಯಪ್ರಕಾಶ ಗೌಡ, ಬಳಗದ ಕೆ.ಎನ್.ಶಿವರುದ್ರಪ್ಪ ಇದ್ದರು.




