Tuesday, June 25, 2024

ಪ್ರಾಯೋಗಿಕ ಆವೃತ್ತಿ

ಜೂನ್ 25ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ನಾಟಕ ಪ್ರದರ್ಶನ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಮಂಡ್ಯ ಜಿಲ್ಲಾ ಘಟಕದ ವತಿಯಿಂದ ಜೂನ್ 25ರಂದು ಸಾಯಂಕಾಲ 4:30 ಗಂಟೆಗೆ ಮಂಡ್ಯದ ಪಿಇಎಸ್ ಕಾಲೇಜಿನ ಆವರಣದಲ್ಲಿರುವ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತ ನಾಟಕ ಪ್ರದರ್ಶನ ನಡೆಯಲಿದೆಯೆಂದು ಪರಿಷತ್ತಿನ ಅಧ್ಯಕ್ಷ ಸಿ. ಶಿವಲಿಂಗಯ್ಯ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಪಿಇಟಿ ಅಧ್ಯಕ್ಷ ಕೆ.ಎಸ್. ವಿಜಯಾನಂದ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಮಹಿಳೆಯ ಜೀವನ ಸುಧಾರಣೆಯಲ್ಲಿ ನಾಲ್ವಡಿಯವರ ಪಾತ್ರ ಎಂಬ ವಿಷಯವನ್ನು ಇತಿಹಾಸ ಸಹ ಪ್ರಾಧ್ಯಾಪಕಿ ಡಾ.ಅನಿತಾ ಎಂ‌.ಎಸ್. ಮತ್ತು ಸಾಮಾಜಿಕ ಸುಧಾರಣೆಯಲ್ಲಿ ಆಡಳಿತಾತ್ಮಕ ನಿಲುವುಗಳು ವಿಷಯವಾಗಿ ಡಾ.ಕೃಷ್ಣಮೂರ್ತಿ ಚಮರಂ ಸಹ ಪ್ರಾಧ್ಯಾಪಕರು ಮುಕ್ತ ವಿವಿ ಮೈಸೂರು ಮಂಡಿಸಲಿದ್ದಾರೆ ಎಂದು ತಿಳಿಸಿದರು.

ಮಳವಳ್ಳಿಯ ಭಗವಾನ್ ಬುದ್ಧ ಬಿಇಡಿ ಕಾಲೇಜಿನ ವಿದ್ಯಾರ್ಥಿಗಳು ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತಾದ ನಾಟಕ ಮಾಡಲಿದ್ದು,ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು. ಮುಖ್ಯಅತಿಥಿಗಳಾಗಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಉಪಾಧ್ಯಕ್ಷ ಡಾ. ವೈ.ಎಸ್. ಸಿದ್ದರಾಜು, ನಿರ್ದೇಶಕಿ ಪ್ರಭಾವತಿ,ಗೌರವಾಧ್ಯಕ್ಷ ಎಂ‌.ಸಿ.ಬಸವರಾಜು ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

ಎಂ.ಸಿ. ಲಂಕೇಶ್, ವಸಂತಮ್ಮ,ಪುಷ್ಪಲತಾ,ಜಯರಾಮು, ವೆಂಕಟಾಚಲಯ್ಯ, ಸುದ್ದಿಗೋಷ್ಠಿಯಲ್ಲಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!