Thursday, April 18, 2024

ಪ್ರಾಯೋಗಿಕ ಆವೃತ್ತಿ

ಬೆಂ-ಮೈ ಹೆದ್ದಾರಿಯಲ್ಲಿ 8 ಬಾರಿ ಪಲ್ಟಿ ಹೊಡೆದ ಕಾರು: ಬದುಕುಳಿದ ಚಾಲಕ

ಮದ್ದೂರು ಸಮೀಪದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಕಾರು 8 ಬಾರಿ ಪಲ್ಟಿ ಹೊಡೆದ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳಾಗಿ ಪವಾಡದ ರೀತಿಯಲ್ಲಿ ಪಾರಾಗಿದ್ದಾರೆ.

ಬೆಂಗಳೂರಿನ ಆರ್.ಟಿ.ನಗರ ನಿವಾಸಿ ವಿನೋದ್ (46)ಹಾಗೂ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾದವರು ಎನ್ನಲಾಗಿದೆ.

ಆ‌ರ್.ಟಿ.ನಗರ ನಿವಾಸಿ ವಿನೋದ್ ಜ್ಯುವೆಲ್ಲರಿ ಶಾಪ್ ಮಾಲೀಕರಾಗಿದ್ದು, ಚಾಮರಾಜನಗರದ ಕನಕಗಿರಿ ಮಠಕ್ಕೆ ತೆರಳಿ ಪೀಠಾಧಿಪತಿಗಳ ಆಶೀರ್ವಾದ ಪಡೆದು ನಂತರ ಬೆಂಗಳೂರಿನ ಕಡೆಗೆ ಮಹೇಂದ್ರ ಎಕ್ಸ್.ಯು.ವಿ ಕಾರಿನಲ್ಲಿ ಪ್ರಯಾಣ ಬೆಳಸಿದ್ದಾರೆ. ಕಾರು ಮದ್ದೂರಿನ ಫೈ ಓವ‌ರ್ ಇಳಿಯುತ್ತಿದ್ದಂತೆ ಕಾರಿನ ಮುಂಭಾಗದ ಎಡ ಭಾಗದ ಟೈರ್ ಸ್ಪೋಟಗೊಂಡು ಅಂದಾಜು 8 ರಿಂದ 9 ಬಾರಿ ಪಲ್ಟಿ ಹೊಡೆದು ಡಿವೈಡರ್ ಗುದ್ದಿ ಸಂಪೂರ್ಣವಾಗಿ ಜಖಂ ಗೊಂಡಿದೆ. ಅಪಘಾತದ ತೀವ್ರತೆಗೆ ಕಾರಿನ ವಿವಿಧ ಭಾಗಗಳ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ತಕ್ಷಣವೇ ಹೆದ್ದಾರಿಯ ವಾಹನ ಸವಾರರು ಹಾಗೂ ಸ್ಥಳೀಯರು ಧಾವಿಸಿ ಕಾರಿನಲ್ಲಿದ್ದವರನ್ನು ಹೊರ ತೆಗೆದು ರಕ್ಷಿಸಿದ್ದು. ಯಾವುದೇ ಸಣ್ಣ ಪುಟ್ಟ ಗಾಯಗಳಾಗದೆ, ಬದುಕುಳಿದಿದ್ದಾರೆ. ಸ್ಥಳಕ್ಕೆ ಮದ್ದೂರು ಸಂಚಾರ ಪೋಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಜೆ.ಇ.ಮಹೇಶ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮದ್ದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!