Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಸರ್ಕಾರಿ ಶಾಲೆಗಳಿಗೆ ಒಂದು ಲಕ್ಷ ನೋಟ್ ಬುಕ್ ; ಮಹಾಲಿಂಗೇಗೌಡ

ಮಂಡ್ಯ ತಾಲ್ಲೂಕಿನ ಸರ್ಕಾರಿ ಶಾಲೆಗಳಿಗೆ ಒಂದು ಲಕ್ಷ ನೋಟ್ ಬುಕ್ ವಿತರಿಸಲಾಗುತ್ತಿದೆ ಎಂದು ಎಂ ಎಂ ಫೌಂಡೇಶನ್ ಅಧ್ಯಕ್ಷ ಮಹಾಲಿಂಗೇಗೌಡ ಮುದ್ದನಘಟ್ಟ ಹೇಳಿದರು.

ಮಂಡ್ಯ ತಾಲ್ಲೂಕಿ ಹಳೇ ಬೂದನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಿ ಮಾತನಾಡಿದರು.

ಎಂಎಂ ಪೌಂಡೇಶನ್ ಧಾರ್ಮಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಅಶಕ್ತರನ್ನು ಗುರುತಿಸಿ ಸಹಾಯಹಸ್ತ ಚಾಚುವ ಮೂಲಕ ರಾಜ್ಯ ಮಟ್ಟದಲ್ಲಿ ಸೇವೆ ಸಲ್ಲಿಸುತ್ತಿದೆ ಎಂದರು.

ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಮುಂದಾಗಬೇಕು. ಶಾಲೆಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಸಮಾಜದಲ್ಲಿ ಗಣ್ಯ ವ್ಯಕ್ತಿ ಎನ್ನಿಸಿಕೊಂಡವರೆಲ್ಲ ಸರ್ಕಾರಿ ಶಾಲೆಯಲ್ಲೇ ಓದಿ ಸಾಧನೆ ಮಾಡಿದವರು. ನಾವು ಮಾಡುವ ಸೇವೆಗಳು ತೋರಿಕೆಗಲ್ಲ, ಇನ್ನೊಬ್ಬರಿಗೆ ಪ್ರೇರಣೆ ಎಂದರು‌‌‌.

ನಿವೃತ್ತ ಪ್ರಾಧ್ಯಾಪಕ ಮಧುಕುಮಾರ್ ಮಾತನಾಡಿ, ಸರ್ಕಾರಿ ಶಾಲೆಗೆ ಹಳೇ ವಿದ್ಯಾರ್ಥಿಗಳು ಅಳಿಲು ಸೇವೆ ಸಲ್ಲಿಸುವಂತಾಗಬೇಕು. ನಾನು ನಿವೃತ್ತಿ ಜೀವನದಲ್ಲಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತವಾಗಿ ಕಂಪ್ಯೂಟರ್ ಶಿಕ್ಷಣ ನೀಡುತ್ತಿರುವುದಾಗಿ ತಿಳಿಸಿದರು.

ವೇದಿಕೆಯಲ್ಲಿ ಪೌಂಡೇಶನ್ ನಿರ್ದೇಶಕ ಪರಮೇಶ್, ಎಸ್ ಡಿ ಎಂ ಸಿ ಅಧ್ಯಕ್ಷ ಗಿರೀಶ್, ಮುಖಂಡರಾದ ಬಿ.ಟಿ.ಕೃಷ್ಣಪ್ಪ, ಗ್ರಾಪಂ ಮಾಜಿ ಸದಸ್ಯರಾದ ಶಂಕರ್, ಮಧು ಬಿ.ಎಸ್, ನಿವೃತ್ತ ಪ್ರಾಧ್ಯಾಪಕ ಮಧುಕುಮಾರ್, ಕರುನಾಡ ಸೇವಕರು ಸಂಘಟನೆಯ ಚಂದ್ರಣ್ಣ ಸೇರಿದಂತೆ ಹಲವರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ