Wednesday, November 18, 2026

ಪ್ರಾಯೋಗಿಕ ಆವೃತ್ತಿ

ಹಾಸ್ಟೆಲ್ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ 

ಮಂಡ್ಯ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿಗೆ ಮೆಟ್ರಿಕ್ ನಂತರ ಸ್ನಾತಕೋತ್ತರ ಹಾಗೂ ವೃತ್ತಿಪರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ., ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಆಸಕ್ತ ಅಭ್ಯರ್ಥಿಗಳು ಮೂಲ ದಾಖಲಾತಿಗಳದೊಂದಿಗೆ ಅರ್ಜಿಯನ್ನು ನವೆಂಬರ್ 10 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮಂಡ್ಯ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೂ.ಸಂ.08232-228688 ಅಥವಾ ವೆಬ್‍ಸೈಟ್ www.bcwd.karnataka.gov.in    ಸಂಪರ್ಕಿಸಬಹುದೆಂದು ಮಂಡ್ಯ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಲ್ಯಾಣಾಧಿಕಾರಿ ಪ್ರಕಟಣೆ ತಿಳಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ