Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ; ಡಾ.ಕುಮಾರ

ದೀಪಾವಳಿ ಹಬ್ಬವನ್ನು ಅಕ್ಟೋಬರ್ 31 ರಿಂದ ನವೆಂಬರ್ 02 ರವರೆಗೆ ಆಚರಿಸಲಾಗುತ್ತಿದ್ದು ದೀಪಾವಳಿ ಹಬ್ಬದ ಸಂದರ್ಭಗಳಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಇತರೆ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವುದನ್ನು ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಿ ಹಾಗೂ ಪಟಾಕಿಗಳನ್ನು ಸ್ಪೋಟಿಸಲು ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಅವಕಾಶ ನೀಡಿ ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ಧಾರೆ.

ಸರ್ಕಾರವು ಅನುಮತಿಸಿರುವ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕಾಗಿದ್ದು, ಸಾರ್ವಜನಿಕರು ಪಟಾಕಿಗಳನ್ನು ಖರೀದಿಸುವ ವೇಳೆಯಲ್ಲಿ ಸ್ವಯಂ ಪರಿಶೀಲಿಸಿಕೊಂಡು ಹಸಿರು ಪಟಾಕಿಗಳನ್ನು ಮಾತ್ರ ಖರೀದಿಸತಕ್ಕದ್ದು. ದೀಪಾವಳಿ ಹಬ್ಬದ ಆಚರಣೆಯ ಸಮಯದಲ್ಲಿ ಸಾರ್ವಜನಿಕರು ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಟಾಕಿಗಳನ್ನು ಸರ್ವೋಚ್ಚ ನ್ಯಾಯಾಲಯವು ಅನುಮತಿಸಿರುವ ವೇಳೆಯಲ್ಲಿ ಮಾತ್ರ ಪಟಾಕಿಗಳನ್ನು ಸ್ಪೋಟಿಸತಕ್ಕದ್ದು. (ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ). ರಾತ್ರಿ ಹತ್ತು ಗಂಟೆಯ ನಂತರ ಪಟಾಕಿ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದಿದ್ದಾರೆ.

ವಿವಿಧ ರೀತಿಯ ನಿಷೇದಿತ ಪಟಾಕಿಗಳನ್ನು ಸ್ಪೋಟಿಸಿರುವುದರಿಂದ ಉಂಟಾಗುವ ಶಬ್ದಮಾಲಿನ್ಯ ಮತ್ತು ವಾಯುಮಾಲಿನ್ಯದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮವಾಗುವುದರಿಂದ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸತಕ್ಕದ್ದು. ಅಲ್ಲದೇ ಸಾರ್ವಜನಿಕರು ಹಸಿರು ಪಟಾಕಿಗಳನ್ನು ಮಾತ್ರ ಬಳಸುವುದು ಪ್ರತಿಯೊಬ್ಬ ನಾಗರೀಕರ ಹಾಗೂ ಸಾರ್ವಜನಿಕರ ಸಾಮಾಜಿಕ ಜವಾಬ್ದಾರಿಯು ಸಹ ಆಗಿರುತ್ತದೆ ಎಂದು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ