Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಪಶು ಆಹಾರ ಗೋದಾಮು ಉದ್ಘಾಟಿಸಿದ ಬಿ.ಆರ್.ರಾಮಚಂದ್ರು

ಮಂಡ್ಯ ತಾಲ್ಲೂಕು ದುದ್ದ ಹೋಬಳಿಯ ಹೊನ್ನೇಮಡು ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಪಶು ಆಹಾರ ಗೋದಾಮನ್ನು ಮನ್ಮುಲ್ ಮಾಜಿ ಅಧ್ಯಕ್ಷ ಬಿ.ಆರ್ ರಾಮಚಂದ್ರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಾಲು ಉತ್ಪಾದಕರು ಪಶುಗಳಿಗೆ ಉತ್ತಮ ಗುಣಮಟ್ಟದ ಆಹಾರ ನೀಡಿದರೆ ಹೆಚ್ಚು ಹಾಲು ಸಂಗ್ರಹಿಸಬಹುದು. ರೈತರು ಉತ್ತಮ ಗುಣಮಟ್ಟದ ಹಾಲು ಪೂರೈಸಿದರೆ ಅವರಿಗೆ ಹೆಚ್ಚು ಹಣವೂ ಸಿಗುತ್ತದೆ. ಹಾಲು ಉತ್ಪಾದಕರ ಹಿತ ಕಾಯುವ ಕೆಲಸವನ್ನು ನಾನು ಸೇರಿದಂತೆ ಮನ್ಮುಲ್ ಸಂಸ್ಥೆ ಮಾಡಲಿದೆ ಎಂದರು.

ಈ ಸಂದರ್ಭದಲ್ಲಿ ಮನ್ಮುಲ್ ನಿರ್ದೇಶಕ ಯು.ಸಿ.ಶಿವಕುಮಾರ್ ಅಧಿಕಾರಿವರ್ಗ, ಸಂಘದ ಅಧ್ಯಕ್ಷ ಬಸವರಾಜು, ನಿರ್ದೇಶಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ