ನಾಗಮಂಗಲ ತಾಲ್ಲೂಕಿನ ಬೆಳ್ಳೂರಿನಲ್ಲಿರುವ ಆದಿಚುಂಚನಗಿರಿ ಆರೋಗ್ಯ ವಿಜ್ಞಾನ ಸಂಸ್ಥೆಗಳ ಆಸ್ಪತ್ರೆಯಲ್ಲಿ ನೇತ್ರ ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿರುವ ಕೆ.ಆರ್.ಪೇಟೆ ಕ್ಷೇತ್ರದ ಜನರ ಆರೋಗ್ಯ ವಿಚಾರಿಸಿದರು.
ಇಂದು ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಡಾ.ನಾರಾಯಣಗೌಡ ಆಸ್ಪತ್ರೆಯ ಸಭಾಂಗಣದಲ್ಲಿ ನೇತ್ರ ಚಿಕಿತ್ಸೆಗೆ ಒಳಗಾದವರ ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿ ಶುಭ ಹಾರೈಸಿದರು.
ಕೆ.ಆರ್.ಪೇಟೆ ತಾಲ್ಲೂಕಿನ 500 ಕ್ಕೂ ಹೆಚ್ಚು ಜನರಿಗೆ ಕಣ್ಣಿನ ಆಪರೇಷನ್ ಮಾಡಿಸಲಾಗಿದ್ದು, ಇಂದು 100 ಕ್ಕೂ ಹೆಚ್ಚು ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದರು.
ಕಳೆದ ಹಲವು ದಿನಗಳಿಂದ ರೇಷ್ಮೆ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಕೆ.ಆರ್. ಪೇಟೆ ತಾಲೂಕಿನಾದ್ಯಂತ ಹೋಬಳಿ ಮಟ್ಟದ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಆಯೋಜಿಸಿದ್ದು, ಈಗಾಗಲೇ ಸಂತೆಬಾಚಹಳ್ಳಿ, ಬೂಕನಕೆರೆ, ಅಕ್ಕಿಹೆಬ್ಬಾಳು, ಕಿಕ್ಕೇರಿ ಹೋಬಳಿಯಲ್ಲಿ ಯಶಸ್ವಿಯಾಗಿ ನೆರವೇರಿದೆ.
ಕ್ಷೇತ್ತದ ಜನರಿಗೆ ಕಣ್ಣಿನ ಆಪರೇಶನ್ ಮಾಡಿಸುವ ಮೂಲಕ ಸಚಿವ ನಾರಾಯಣಗೌಡ ಉತ್ತಮ ಕೆಲಸ ಮಾಡಿಸಿದ್ದಾರೆ ಎಂಬುದು ಜನರ ಮಾತು.