Monday, November 23, 2026

ಪ್ರಾಯೋಗಿಕ ಆವೃತ್ತಿ

ಕರ್ನಾಟಕದಲ್ಲಿ ಹಿಂದಿ ದಿವಸ ಆಚರಣೆಗೆ ಜೆಡಿಎಸ್ ತೀವ್ರ ವಿರೋಧ

ಕನ್ನಡಿಗರ ಮೇಲಿನ ಹಿಂದಿ ಹೇರಿಕೆ ಹಾಗೂ ಕರ್ನಾಟಕದಲ್ಲಿ ಹಿಂದಿ ದಿವಸ ಆಚರಣೆಯನ್ನು ಪ್ರಾದೇಶಿಕ ಪಕ್ಷವಾದ ಜಾತ್ಯತೀತ ಜನತಾದಳ ತೀವ್ರವಾಗಿ ಖಂಡಿಸಿದೆ.

ಕಾಂಗ್ರೆಸ್ ಪಕ್ಷ ಶುರು ಮಾಡಿದ ಈ ಹಿಂದಿ ದಿವಸ ಆಚರಣೆಯನ್ನು ಹಿಂದಿಯೇತರ ರಾಜ್ಯಗಳಲ್ಲಿ ಆಚರಿಸುವುದನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಜೆಡಿಎಸ್ ಬರೆದುಕೊಂಡಿದೆ.

“>

ಪ್ರಾದೇಶಿಕ ಭಾಷೆಗಳ‌ ಮೇಲಿನ ಈ ಮಲತಾಯಿ ಧೋರಣೆಯನ್ನು ನಾವು ಸಹಿಸುವುದಿಲ್ಲ. ಕನ್ನಡಿಗರಿಗೆ ಕನ್ನಡವೇ ರಾಷ್ಟ್ರೀಯ ಭಾಷೆ ಎಂದು ಜೆಡಿಎಸ್ ಹೇಳಿದೆ.

ಆದರೆ ಜೆಡಿಎಸ್ ಇತ್ತೀಚೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎನ್ನುವ ಬೆಳವಣಿಗೆಗಳು ನಡೆಯುತ್ತಿವೆ, ಒಂದು ಕಡೆ ಬಿಜೆಪಿ ಪಕ್ಷವು ಹಿಂದಿ ಹೇರಿಕೆ ಪರವಾಗಿದ್ದರೆ, ಅದರೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವ ಜೆಡಿಎಸ್, ಹಿಂದಿ ಹೇರಿಕೆ ವಿರುದ್ದ ಧ್ವನಿ ಎತ್ತಿರುವುದು ಎಲ್ಲರಿಗೂ ಆಶ್ಚರ್ಯ ತಂದಿದೆ. ಮುಂದಿನ ದಿನಗಳಲ್ಲಿ ಯಾವ ರಾಜಕೀಯ ಬೆಳವಣಿಗೆಗಳು ನಡೆಯುತ್ತವೆ ಎಂಬುದನ್ನು ಕಾದು ನೋಡಬೇಕಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ